ಹೊಸಪೇಟೆ: ವಿಶ್ವವಿಖ್ಯಾತ ಹಂಪಿಯಲ್ಲಿ ಭಾರತೀಯ ಸರ್ವೇಕ್ಷಣಾ ಪುರಾತತ್ವ ಇಲಾಖೆ (ಎಎಸ್ಐ) ಪ್ರವಾಸಿಗರಿಗೆ ಹಾಗೂ ಭಕ್ತರಿಗೆ ಭದ್ರತೆಯನ್ನು ನೀಡಲು ಮುಂದಾಗಿದ್ದು, ಎರಡು ಪ್ರದೇಶದಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಸಲಾಗಿದೆ.
ಓದಿ: ಶೀಘ್ರದಲ್ಲೇ ಸಿಡಿಯುತ್ತಂತೆ ಸಿಡಿ: ವಿಶ್ವನಾಥ್, ಯತ್ನಾಳ್ ಹೇಳಿಕೆಗೆ ಸಿಎಂ ಪ್ರತ್ಯುತ್ತರ
ಹಂಪಿಯ ವಿಜಯ ವಿಠ್ಠಲ ದೇವಸ್ಥಾನ ಹಾಗೂ ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಸಲಾಗಿದೆ. ಈ ಎರಡು ಪ್ರದೇಶಗಳಲ್ಲಿ ಹೆಚ್ಚಿನ ಭಕ್ತರು ಹಾಗೂ ಪ್ರವಾಸಿಗರು ಭೇಟಿ ನೀಡುತ್ತಾರೆ. ಹಾಗಾಗಿ ಎಎಸ್ಐ ಭದ್ರತೆ ದೃಷ್ಟಿಯಿಂದ ಈ ವ್ಯವಸ್ಥೆ ಮಾಡಲಾಗಿದೆ.
ಈ ಕುರಿತು 'ಈಟಿವಿ ಭಾರತ'ದೊಂದಿಗೆ ಭಾರತೀಯ ಸರ್ವೇಕ್ಷಣಾ ಪುರಾತತ್ವ ಇಲಾಖೆ ಹಂಪಿ ವೃತ್ತದ ಸೂಪರಿಂಡೆಂಟ್ ಕಾಳಿಮುತ್ತು ಮಾತನಾಡಿ, ವಿಜಯ ವಿಠ್ಠಲ ದೇವಸ್ಥಾನದಲ್ಲಿ ಮೆಟಲ್ ಡಿಟೆಕ್ಟರ್ ಟ್ರಯಲಿಂಗ್ ನಡೆಯುತ್ತಿದೆ. ಬಳಿಕ ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿದೆ ಎಂದರು.
ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಸುವ ಕಾರ್ಯ ನಡೆದಿದೆ. ಮುಂದಿನ ದಿನಗಳಲ್ಲಿ ಹಂಪಿಯ ಇತರೆಡೆ ಮೆಟಲ್ ಡಿಟೆಕ್ಟರ್ ಅಳವಡಿಸುವ ಕುರಿತು ತೀರ್ಮಾನಿಸಲಾಗುವುದು ಎಂದು ಹೇಳಿದರು.