ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಹಾಸ್ಟೆಲ್‌ಗಳಿಗೆ ಅಗತ್ಯ ಮೂಲಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
ಇದೇ ವೇಳೆ ವಸತಿ ನಿಲಯಕ್ಕೆ ಭೇಟಿ ನೀಡಿ ಮಾತನಾಡಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಸುರೇಶ್ ಬಾಬು, ಏಪ್ರಿಲ್ 6 ರಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಸತಿ ನಿಲಯದಲ್ಲಿ ಊಟ ಮಾಡಿದ್ದ 40 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು ಎಂದು ಮಾಹಿತಿ ಬಂದಿತ್ತು. 7ನೇ ತಾರೀಖು ಭೇಟಿ ನೀಡಿದ್ದೆ. ಊಟವನ್ನು ಪರೀಕ್ಷೆಗೆ ಕಳಿಸಿದ್ದೇವೆ, ವರದಿ ಬಂದ ನಂತರ ಮಾಹಿತಿ ನೀಡುವ ಭರವಸೆ ನೀಡಿದ್ದಾರೆ. ಅಲ್ಲದೆ ಈ ಸಂಬಂಧ ಇಬ್ಬರನ್ನ ಅಮಾನತು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿಗಳ ಬೇಡಿಕೆ :
ಖಾಯಂ ನಿಲಯ ಪಾಲಕರನ್ನು ನೇಮಕ ಮಾಡಬೇಕು. ಅಡುಗೆ ಸಿಬ್ಬಂದಿ ಬದಲಾವಣೆ ಮಾಡಬೇಕು ಮತ್ತು ಅಡುಗೆ ಸಿಬ್ಬಂದಿ ಹಾಗೂ ನಿಲಯ ಪಾಲಕರ ಮೇಲೆ ತನಿಖೆಯಾಗಬೇಕು. ಜೊತೆಯಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ನೀಡಬೇಕೆಂದು ಮನವಿ ಪತ್ರ ಸಲ್ಲಿಸಿದ್ದಾರೆ.