ಬಳ್ಳಾರಿ: ಹಂಪಿ ಕನ್ನಡ ವಿಶ್ವವಿದ್ಯಾಲಯದ ಎಸ್.ಸಿ ಮತ್ತು ಎಸ್.ಟಿ ಸಂಶೋಧನಾ ವಿದ್ಯಾರ್ಥಿಗಳು ಆಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.
ಹೊಸಪೇಟೆ ತಾಲೂಕಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಬೆಳಿಗ್ಗೆಯಿಂದಲೇ ಸಂಶೋಧನಾ ವಿದ್ಯಾರ್ಥಿಗಳು ಕುಲಪತಿ ಕಚೇರಿಯ ಮುಂಭಾಗದಲ್ಲಿ ಧರಣಿ ಕುಳಿತಿದ್ದಾರೆ.
ಈ ವೇಳೆ ಎಸ್.ಎಫ್.ಐ ನ ರಾಜ್ಯಾಧ್ಯಕ್ಷ ಅಂಬರೇಶ್ ಅವರು, ಎಸ್.ಸಿ ಮತ್ತು ಎಸ್.ಟಿ ಸಂಶೋಧನಾ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಮಾತನಾಡಿದರು.
ಮಹಿಳಾ ಸಂಶೋಧನಾ ವಿದ್ಯಾರ್ಥಿಗಳು ಸಹ ಹಾಸಿಗೆ ತೆಗೆದುಕೊಂಡು ಬಂದು ಕುಲಪತಿ ಕಚೇರಿ ಮುಂಭಾಗದಲ್ಲಿಯೇ ಮಲಗಿದರು. ಒಟ್ಟಾರೆಯಾಗಿ ಎಸ್.ಸಿ ಮತ್ತು ಎಸ್.ಟಿ ಸಂಶೋಧನಾ ವಿದ್ಯಾರ್ಥಿಗಳು ಫೆಲೋಶಿಪ್ ನೀಡುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಕಮಲಾಪುರ ಠಾಣೆಯ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.