ಬಳ್ಳಾರಿ: ಹಂಪಿ ಕನ್ನಡ ವಿವಿಯ ಬೋಧಕೇತರ ಸಿಬ್ಬಂದಿ ಅಧ್ಯಾಯನಾಂಗ ವಿಭಾಗದಲ್ಲೇ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಮೃತ ಸಿಬ್ಬಂದಿ ಹನುಮಂತರಾಯ(45) ಜವಾನರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈತ ಇಂದು ಬೆಳಗ್ಗೆ ಅಧ್ಯಾಯನಾಂಗ ವಿಭಾಗದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನೂ ಸಾಲಬಾಧೆಯಿಂದ ನೇಣಿಗೆ ಶರಣಾಗಿರಬಹದು ಎಂದು ಪೊಲೀಸ್ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಕಮಲಾಪುರ ಠಾಣೆಯ ಪಿಎಸ್ಐ ಶಶಿಧರ್ ತಿಮ್ಮಪ್ಪ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ವಿವಿ ಕುಲಪತಿ, ಕುಲಸಚಿವರು ಮತ್ತು ನೂರಾರು ವಿದ್ಯಾರ್ಥಿಗಳು ಸ್ಥಳದಲ್ಲಿ ಇದ್ದರು.