ಬಳ್ಳಾರಿ: ಬಳ್ಳಾರಿ ಮಹಾನಗರ ಗುಗ್ಗರಹಟ್ಟಿ ಪ್ರದೇಶ ವ್ಯಾಪ್ತಿಯಲ್ಲಿ ಓಡಾಡಲು ಆಗದ ವ್ಯಕ್ತಿಯೊಬ್ಬರಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಕೋವಿಡ್ ಲಸಿಕೆ ಹಾಕಿದರು.
ಮೂಳೆ, ಕ್ಷಯರೋಗದಿಂದ ಬಳಲುತ್ತಿದ್ದ ವೀರೇಶ ಆಟೋರಿಕ್ಷಾ ಮೂಲಕ ಲಸಿಕಾ ಕೇಂದ್ರಕ್ಕೆ ಬಂದಿದ್ದರು. ಆತನಿಗೆ ಕೋವಿಡ್ ಲಸಿಕೆ ಮಹತ್ವದ ಕುರಿತು ಆರೋಗ್ಯ ಇಲಾಖೆ ಸಿಬ್ಬಂದಿ ಜಾಗೃತಿ ಮೂಡಿಸುವ ಮೂಲಕ ಲಸಿಕೆ ಹಾಕಿದ್ದಾರೆ.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ್ ಅವರು, ಮೂಳೆ, ಕ್ಷಯ ರೋಗದಿಂದ ಬಳಲುತ್ತಿದ್ದ ವೀರೇಶ್ ಅವರ ಯೋಗಕ್ಷೇಮ ವಿಚಾರಿಸಿ, ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಪ್ರೇರೇಪಿಸಿದ್ದಾರೆ.