ಬಳ್ಳಾರಿ: ಗಣಿನಾಡಲ್ಲಿ ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳನ್ನು ನಡೆಸುತ್ತಿರುವ ವಿಷಯ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಬಿ.ಶ್ರೀರಾಮುಲು ಪ್ರತಿಕ್ರಿಯಿಸಿದ್ದು, ಸೂಕ್ಷ್ಮವಾಗಿ ಇಂತಹ ವೈದ್ಯರನ್ನ ಗಮನಿಸಿತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇಂತಹ ವೈದ್ಯರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ನಗರದ ವಾಲ್ಮೀಕಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಸಚಿವರು, ನಾನು ಹೊಸದಾಗಿ ಪಾಲಿಸಿವೊಂದನ್ನು ಜಾರಿಗೆ ತರುತ್ತಿದ್ದೇನೆ. ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳನ್ನು ಹೊಂದಿರುವುದನ್ನ ಗಮನಿಸುತ್ತಿದ್ದೇವೆ. ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಾ, ಖಾಸಗಿ ಕ್ಲಿನಿಕ್‌ಗಳಲ್ಲಿ ಕಾರ್ಯನಿರ್ವಹಿಸುವುದು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸರ್ಕಾರಿ ಹಾಗೂ ಖಾಸಗಿ ವೈದ್ಯರಿಗೆ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಯೋಜನೆಯಡಿ ಶೇ.30ರ ರಿಯಾಯ್ತಿ ನೀಡಿ ಉತ್ತಮ ಸಂಬಳವನ್ನು ವೈದ್ಯರಿಗೆ ನೀಡಲಾಗುತ್ತಿದೆ.ಇಲ್ಲಿ ಸಮರ್ಪಕವಾದ ನ್ಯಾಯ ಒದಗಿಸಲು ಸಾಧ್ಯವಾಗದಿದ್ದರೆ ಸೇವೆ ತ್ಯಜಿಸಿ ಹೋಗಿ ನಮ್ಮದೇನು ಅಭ್ಯಂತರವಿಲ್ಲ ಎಂದು ಹೇಳಿದರು.