ETV Bharat / state

ರಾಜ್ಯದಲ್ಲಿ ಕೊರೊನಾ ಭೀತಿ ಇಲ್ಲ : ಟ್ವೀಟ್  ಮೂಲಕ ಶ್ರೀರಾಮುಲು ಅಭಯ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು . ರಾಜ್ಯದ ಎಲ್ಲ ಹಳ್ಳಿಗಳಲ್ಲಿ #COVID19 ಬಗ್ಗೆ ಅರಿವು ಮೂಡಿಸಲು ಸೂಚನಾ ಫಲಕ ಅಳವಡಿಸುವಂತೆ ಸೂಚನೆ‌‌ ನೀಡಿದ್ದಾರೆ.

Health Minister Sriramulu tweet
ರಾಜ್ಯದಲ್ಲಿ ಕೊರೊನಾ ಭೀತಿ ಹಿನ್ನಲೆ: ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್
author img

By

Published : Mar 7, 2020, 8:17 AM IST

ಬಳ್ಳಾರಿ: ಕರ್ನಾಟಕ ರಾಜ್ಯದಲ್ಲಿ ಕೊರೊನಾ ಭೀತಿ ಎದುರಾದ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ಅವರು ಟ್ವೀಟ್ ಮಾಡಿದ್ದಾರೆ.‌

  • ಬೆಂಗಳೂರಿನ ವಿವಿಧ ಮಾಲ್ ಹಾಗೂ ಕ್ಲಬ್ ಗಳಲ್ಲಿ ಮುಂಜಾಗ್ರತಾ ಕ್ರಮಗಳು ಹಾಗೂ ಅರಿವು ಮೂಡಿಸುವ ಸಲುವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಂಘಗಳ ಅಧಿಕಾರಿಗಳೊಂದಿಗೆ ವಿಸ್ತೃತ ಚರ್ಚೆ ನಡೆಸಿ, ನಿರ್ದೇಶನ ನೀಡಲಾಗಿದೆ. ಹಳ್ಳಿಗಳಲ್ಲಿ #COVID19 ಬಗ್ಗೆ ಅರಿವು ಮೂಡಿಸಲು ಸೂಚನಾ ಫಲಕ ಅಳವಡಿಸುವಂತೆ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಸೂಚಿಸಲಾಗಿದೆ.

    — B Sriramulu (@sriramulubjp) March 6, 2020 " class="align-text-top noRightClick twitterSection" data=" ">

ರಾಜ್ಯದಲ್ಲಿ ಈವರೆಗೂ ಕೊರೊನಾ ವೈರಸ್​ನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ. ರಾಜ್ಯಕ್ಕೆ ಬರುವ ಅನ್ಯದೇಶ ವಾಸಿಗಳನ್ನ ತಪಾಸಣೆ ಮಾಡಲಾಗುತ್ತಿದೆ. ಈವರೆಗೆ 72,542 ಪ್ರಯಾಣಿಕರನ್ನು ತಪಾಸಣೆ ಮಾಡಲಾಗಿದೆ. ರಾಜಧಾನಿ ಬೆಂಗಳೂರಿನ ವಿವಿಧ ಮಾಲ್ ಹಾಗೂ ಕ್ಲಬ್​ಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲಾಗಿದೆ. ಜಾಗೃತಿ ಮೂಡಿಸಲು ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಚರ್ಚಿಸಿ, ಸೂಕ್ತ ನಿರ್ದೇಶನ ನೀಡಲಾಗಿದೆ. ರಾಜ್ಯದ ಎಲ್ಲ ಹಳ್ಳಿಗಳಲ್ಲಿ #COVID19 ಬಗ್ಗೆ ಅರಿವು ಮೂಡಿಸಲು ಸೂಚನಾ ಫಲಕ ಅಳವಡಿಸುವಂತೆ ಸೂಚನೆ‌‌ ನೀಡಲಾಗಿದೆ ಎಂದು ಟ್ವೀಟ್​ನಲ್ಲಿ ಶ್ರೀರಾಮುಲು ಘೋಷಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.