ಬಳ್ಳಾರಿ: ಕಳೆದ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಹೆದ್ದಾರಿಯ ತಗ್ಗು ಪ್ರದೇಶಗಳಲ್ಲಿ ನೀರು ನುಗಿದ್ದು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಖಾನಾಹೊಸಹಳ್ಳಿ, ಹುಲಿಕೆರೆ, ಬಣವಿಕಲ್ಲು ಪ್ರದೇಶದ ಲಿಂಕ್ ರಸ್ತೆಗಳಲ್ಲಿ ಎರಡು ಅಡಿ ನೀರು ನಿಂತಿದ್ದು, ವಾಹನಗಳ ಸಂಚಾರ ಹಾಗೂ ಸಾರ್ವಜನಿಕರು ಪರದಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ಮಳೆ ನೀರು ಸುತ್ತಲಿನ ಆಸ್ಪತ್ರೆ ಹಾಗೂ ಕಟ್ಟಡಗಳ ಮುಂದೆ ನೀರು ಹರಿಯುತ್ತಿದೆ.
ಬಣವಿಕಲ್ಲಿನ ಅವಾಂತರ :
ಬಣವಿಕಲ್ಲಿನ ಒಳ ಹೋಗುವ ರಸ್ತೆ ಸಂಪೂರ್ಣವಾಗಿ ಜಾಲವೃತಗೊಂಡಿದೆ. ಇದರಿಂದ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ಈ ಕುರಿತಂತೆ ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವೆಲ್ಲ ಸಮಸ್ಯೆ ಉಂಟಾಗಿದೆ ಎಂಬುದರ ಕುರಿತು ವಿಡಿಯೋ ಮಾಡಿ ವಾಟ್ಸ್ಆ್ಯಪ್ ಗ್ರೂಪ್ ಗೆ ಹಾಕಿ ಅಧಿಕಾರಿಗಳ ಗಮನಕ್ಕೆ ತರುವ ಪ್ರಯತ್ನವನ್ನು ಮಾಡಲಾಗಿದೆ.
ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದ ಅಧಿಕಾರಿಗಳು ಲಿಂಕ್ ರಸ್ತೆಗಳಲ್ಲಿ ಮಳೆ ನೀರು ನಿಲ್ಲದಂತೆ ಕ್ರಮ ಕೈಗೊಂಡು ಸಾರ್ವಜನಿಕರಿಗೆ, ವಾಹನ ಸವಾರರಿಗೆ ಅನುಕೂಲ ಮಾಡಿಕೊಡಬೇಕಾಗಿದೆ.