ಹೊಸಪೇಟೆ: ಪಶ್ಚಿಮ ಬಂಗಾಳದಲ್ಲಿನ ಬಿಜೆಪಿ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ 11 ಜನ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷದ ಅಟ್ಟಹಾಸ ಮುಂದುವರೆದಿದೆ. ಅಧಿಕಾರಿದಲ್ಲಿರುವವರು ಶಾಂತಿಯನ್ನು ಕದಡುತ್ತಿದ್ದಾರೆ. ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಕೊರೊನಾ ಕರ್ಫ್ಯೂ ಜಾರಿಯಲ್ಲಿದ್ದು, ಈ ಸಂದರ್ಭದಲ್ಲಿ ಯಾವುದೇ ಪ್ರತಿಭಟನೆ, ಗುಂಪು ಸೇರುವುದಕ್ಕೆ ಸಂಪೂರ್ಣ ನಿಷೇಧವಿದೆ.
ಆದರೆ, ಬಿಜೆಪಿ ಕಾರ್ಯಕರ್ತರು ನಗರದ ರೋಟರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಗೆ ಅನುಮತಿ ನೀಡಿದ್ದು ಯಾರು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ.