ಹೊಸಪೇಟೆ: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಸಿಪಿಐ(ಎಂ) ತಾಲೂಕು ಸಮಿತಿ ಕಾರ್ಯಕರ್ತರು ಉಕ್ಕಡಕೇರಿಯಲ್ಲಿ ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರದ ಜನ ವಿರೋಧಿ ನಡೆಗಳ ವಿರುದ್ದ ದೇಶವ್ಯಾಪಿ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಕೊರೊನಾದಿಂದ ಜನ ತತ್ತರಿಸಿ ಹೋಗಿದ್ದಾರೆ. ಆದರೆ, ಮೋದಿ ಅವರು ದೇಶದ ಸಾರ್ವಜನಿಕ ಕಂಪನಿಗಳನ್ನು ಖಾಸಗಿಯವರಿಗೆ ಉದಾರವಾಗಿ ಮಾರಾಟ ಮಾಡುತ್ತಿದ್ದಾರೆ. ಅಲ್ಲದೇ, ದೊಡ್ಡ ಬಂಡವಾಳದಾರರಿಗೆ ಅನುಕೂಲವಾಗುವಂತಹ ಕಾನೂನುಗಳನ್ನು ಜಾರಿಗೆ ತರುತ್ತಿದ್ದಾರೆ. ಈ ಕೂಡಲೇ ಜನವಿರೋಧಿ ನೀತಿಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.