ಹೊಸಪೇಟೆ: ಕೊಲೆ ಅಪರಾಧಿಗೆ ಜೀವವಾಧಿ ಶಿಕ್ಷೆ ವಿಧಿಸಿ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ. ರಾಜಶೇಖರ್ ಆದೇಶ ಹೊರಡಿಸಿದ್ದಾರೆ.
ಹಗರಿಬೊಮ್ಮನಹಳ್ಳಿ ತಾಲೂಕಿನ ನಂದಿ ಬಂಡಿ ಗ್ರಾಮದ ಕುಂಬಾರ ಕೋಟ್ರೇಶನಿಗೆ ಜೀವವಾಧಿ ಶಿಕ್ಷೆ ವಿಧಿಸಲಾಗಿದೆ. ತನ್ನ ಪತ್ನಿಯ ಬಗ್ಗೆ ಇಲ್ಲ ಸಲ್ಲದ ಮಾತುಗಳನ್ನಾಡಿದ್ದಕ್ಕೆ ಕುಂಬಾರ್ ಕೊಟ್ರೇಶ್, ಈಡಿಗೇರ್ ರಾಮಪ್ಪ ಎಂಬುವವರನ್ನ 2017 ರಲ್ಲಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದರು. ಸಂಡೂರಿನ ವೃತ್ತ ನಿರೀಕ್ಷಕ ಗೋರ್ಪಡೆ ಯಲ್ಲಪ್ಪ ಅವರು ಆರೋಪಿ ವಿರುದ್ಧ ತನಿಖೆ ನಿರ್ವಹಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಧೀಶ ಕೆ.ಎಂ. ರಾಜಶೇಖರ್, ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ರೂ.25,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.