ಹೊಸಪೇಟೆ/ವಿಜಯನಗರ: ನಗರದ ಜೆಸ್ಕಾಂ ಜೂನಿಯರ್ ಎಂಜಿನಿಯರ್ ಇಂದು ಕೊರೊನಾಗೆ ಬಲಿಯಾಗಿದ್ದಾರೆ.
ನಗರದ ಜೆಸ್ಕಾಂ ಕಚೇರಿಯ ಜೂನಿಯರ್ ಎಂಜಿನಿಯರ್ ಇ.ಗೋಪಿ(49) ಕೊರೊನಾ ಸೋಂಕಿನಿಂದ ಸಾವನ್ನಪ್ಪಿರುವ ಅಧಿಕಾರಿ.
ಕಳೆದ ಮೂರ್ನಾಲ್ಕು ದಿನಗಳಿಂದ ನಗರದ ಎಂಸಿಹೆಚ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.