ಹೊಸಪೇಟೆ: ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಜನಜಂಗುಳಿ ಕಂಡುಬಂದ ಹಿನ್ನೆಲೆ ಕೊರೊನಾ ನಿಯಮಗಳನ್ನು ಪಾಲಿಸುವಂತೆ ಉಪ ವಿಭಾಗಾಧಿಕಾರಿ ಸಿದ್ರಾಮೇಶ್ವರ ವ್ಯಾಪಾರಸ್ಥರಿಗೆ ಖಡಕ್ ವಾರ್ನಿಂಗ್ ನೀಡಿದರು.
ರಿಟೇಲ್ ವ್ಯಾಪಾರಕ್ಕೆ ಬೇರೆ-ಬೇರೆ ಕಡೆಗಳಲ್ಲಿ ಮಾರುಕಟ್ಟೆ ಮಾಡಲಾಗಿದೆ. ಅದನ್ನು ಬಿಟ್ಟು ಎಪಿಎಂಸಿಯಲ್ಲಿ ಮಾರಾಟ ಮಾಡ್ತಿರಾ ಎಂದು ವ್ಯಾಪಾರಸ್ಥರನ್ನು ತರಾಟೆಗೆ ತೆಗೆದುಕೊಂಡರು. ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಸಿ ಎಚ್ಚರಿಕೆ ನೀಡಿದರು. ಡಿವೈಎಸ್ಪಿ ವಿ.ರಘುಕುಮಾರ ಹಾಗೂ ಟಿಬಿ ಡ್ಯಾಂ ಸಿಪಿಐ ನಾರಾಯಣ ವ್ಯಾಪಾರಸ್ಥರಿಗೆ ಕೊರೊನಾ ನಿಯಮ ಪಾಲಿಸುವಂತೆ ಸೂಚಿಸಿದರು.
ಪೊಲೀಸರಿಗೆ ವಕ್ಕರಿಸಿದ ಕೊರೊನಾ!
ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಇದರ ನಡುವೆ ಇದೀಗ ಇಬ್ಬರು ಪೊಲೀಸರಿಗೆ ಕೊರೊನಾ ವಕ್ಕರಿಸಿದೆ.
ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ ಬೇರೆ ದಿನಗಳಿಗೂ ವಿಸ್ತರಣೆ ಪ್ರಸ್ತಾಪ ಇಲ್ಲ: ಗೃಹ ಸಚಿವ ಬೊಮ್ಮಾಯಿ ಸ್ಪಷ್ಟನೆ
ಪಟ್ಟಣ ಹಾಗೂ ಗ್ರಾಮೀಣ ಠಾಣೆಯ ಪೊಲೀಸರಿಗೆ ಕೊರೊನಾ ಸೋಂಕು ತಗುಲಿದೆ. ಈಗಾಗಲೇ ಪೊಲೀಸರಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.
74 ಪ್ರಕರಣಗಳು ಪತ್ತೆ:
ನಿನ್ನೆ ಒಂದೇ ದಿನ 74 ಪ್ರಕರಣಗಳು ಹೊಸಪೇಟೆ ತಾಲೂಕಿನಲ್ಲಿ ಕಂಡುಬಂದಿವೆ. ಸದ್ಯ 803 ಸಕ್ರಿಯ ಪ್ರಕರಣಗಳಿವೆ.