ಹೊಸಪೇಟೆ : ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಮಕ್ಕಳಿಗೆ ವಿಷವುಣಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ನಂಜುಂಡೇಶ್ವರ (32), ಪತ್ನಿ ಪಾರ್ವತಿ (30), ಗೌತಮಿ (3), ಸ್ವರೂಪ್ (2) ಮೃತ ದುರ್ದೈವಿಗಳಾಗಿದ್ದಾರೆ. ನಂಜುಂಡೇಶ್ವರ ಜಿಂದಾಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಡೆತ್ನೋಟ್ ಬರೆದಿಟ್ಟಿರುವ ನಂಜುಂಡೇಶ್ವರ ನಮ್ಮ ಸಾವಿಗೆ ಯಾರೂ ಕಾರಣರಲ್ಲ ಎಂದು ಉಲ್ಲೇಖಿಸಿದ್ದಾರೆ. ಈ ಬಗ್ಗೆ ಗಾದಿಗನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.