ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿಸಿ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯು ಕೈಗೊಂಡಿದ್ದ ಅನಿರ್ದಿಷ್ಟಾವಧಿ ಧರಣಿಯು ಇಂದಿಗೆ 13ನೇ ದಿನಕ್ಕೆ ಕಾಲಿರಿಸಿದ್ದು, ಹೋಟೆಲ್ ಮಾಲೀಕರ ಸಂಘ ಹಾಗೂ ಇನ್ನಿತರ ಸಮಿತಿಗಳು ಕೈ ಜೋಡಿಸಿವೆ.
ನಗರದ ಡಿಸಿ ಕಚೇರಿ ಎದುರು ಸ್ಥಾಪಿಸಲಾದ ತಾತ್ಕಾಲಿಕ ಟೆಂಟ್ ನಲ್ಲಿ ನಾನಾ ಸಂಘಟನೆಗಳಾದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಜಿಲ್ಲಾ ಹತ್ತಿ ವ್ಯಾಪಾರಸ್ಥರ ಸಂಘ ಹಾಗೂ ದಲ್ಲಾಳಿ ವರ್ತಕರ ಸಂಘ, ಜಿಲ್ಲಾ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟ ನಾಶಕ ಮಾರಾಟಗಾರರ ಸಂಘದ ಮುಖಂಡರು ಪಾಲ್ಗೊಂಡು ರಾಜ್ಯ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ. ಬಳಿಕ, ಕೆಲಕಾಲ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.