ಬಳ್ಳಾರಿ : ಮಾರಕ ಕೃಷಿ ಕಾಯ್ದೆಗಳ ಬಗ್ಗೆ ರೈತಾಪಿ ವರ್ಗದಲ್ಲಿ ಜಾಗೃತಿ ಮೂಡಿಸಲು ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ಜಯಚಂದ್ರ ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಎಪಿಎಂಸಿ ಹಾಗೂ ಭೂಸುಧಾರಣಾ ಕಾಯಿದೆಗಳು ರೈತ ವಿರೋಧಿಯಾಗಿವೆ. ಈ ಕಾಯಿದೆಗಳು ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಿಗೆ ಮಾರಕವಾಗಿವೆ. ಸಕಾಲದಲ್ಲಿ ಮಳೆಯಾಗದ ಕಾರಣ, ಕೃಷಿಯಿಂದ ವಿಮುಖರಾಗುವ ಈ ಕಾಲಘಟ್ಟದಲ್ಲಿ ಇಂತಹ ಕಾಯಿದೆಗಳು ರೈತರಿಗೆ ಮಾರಕವಾಗಿವೆ ಎಂದರು.
ಉದ್ಯೋಗವನ್ನರಸಿ ಕೃಷಿ ಕ್ಷೇತ್ರದಿಂದ ವಿಮುಖರಾಗಿ ದೂರದ ಮಹಾನಗರಗಳಿಗೆ ಹೋಗ್ತಾ ಇರೋದು ಸರ್ವೇ ಸಾಮಾನ್ಯವಾಗಿದೆ. ಆದರೆ, ವಾಪಸ್ ಬಂದ್ರೂ ಕೂಡ ಕೃಷಿ ಕ್ಷೇತ್ರ ಮತ್ತೆ ಅವರನ್ನು ಕೈಹಿಡಿಯಲಿದೆ. ಹೀಗಾಗಿ, ಕೃಷಿ ಕ್ಷೇತ್ರವನ್ನು ಖಾಸಗೀಕರಣ ಮಾಡೋದು ತರವಲ್ಲ. ಇಂತಹ ಕಾಯಿದೆಗಳ ಬಗ್ಗೆ ರೈತಾಪಿ ವರ್ಗದವರಲ್ಲಿ ಜಾಗೃತಿ ಮೂಡಿಸಲು ನಾಳೆ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದ ಹಿರಿಯ ಮುಖಂಡರೆಲ್ಲರೂ ಒಗ್ಗೂಡಿ ಈ ಮೂರು ಕಾಯಿದೆಗಳ ಕುರಿತು ಜಾಗೃತಿ ಮೂಡಿಸಲಾಗುವುದು. ಫ್ರೀಡಂ ಪಾರ್ಕ್ನಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ಬೃಹತ್ ರೈತರ ಅಧಿಕಾರ ದಿನವನ್ನ ಆಚರಿಸಲಾಗುವುದು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕ ಮುಖಂಡರು, ಜನಪ್ರತಿನಿಧಿಗಳು ಸಮಾವೇಶದಲ್ಲಿ ಸೇರಲಿದ್ದಾರೆ ಎಂದು ಮಾಜಿ ಸಚಿವ ಜಯಚಂದ್ರ ಹೇಳಿದರು.