ಬಳ್ಳಾರಿ: ವಿದ್ಯಾರ್ಥಿಗಳು ಪಾಠದ ಜೊತೆಗೆ ಆಟಗಳಿಗೆ ಸಮಯವನ್ನು ಮೀಸಲಿಡುವುದರಿಂದ ದೈಹಿಕವಾಗಿ, ಮಾನಸಿಕವಾಗಿ ಸದೃಢರಾಗಿರಬಹುದು ಎಂದು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಿ.ಇಂದಿರಾ ಅವರು ಹೇಳಿದರು.
ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 2019-20ನೇ ಸಾಲಿನ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಅಂತರ ಕಾಲೇಜು ಗುಡ್ಡಗಾಡು ಓಟದ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪ್ರೊ. ಡಿ ಇಂದಿರಾ ಅವರು ಮಾತನಾಡಿ ವಿದ್ಯಾರ್ಥಿನಿಯರಿಗೆ ಇಂತಹ ಸ್ಪರ್ಧೆಗಳನ್ನು ಏರ್ಪಡಿಸುವುದರಿಂದ ಮಾನಸಿಕ ಸಮತೋಲನೆಯನ್ನು ಕಾಪಾಡಿಕೊಳ್ಳಬಹುದು. ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯನ್ನು ಭಾಗವಹಿಸಿಬೇಕು ಎಂದರು.
ವಿಜೇತರ ವಿವರ :
10 ಕಿ.ಮೀ ಓಟದ ಸ್ಪರ್ಧೆಯಲ್ಲಿ ಪಥಮ ಸ್ಥಾನವನ್ನು ಧಾರವಾಡದ ಕೆಎಸ್‍ಜೆ ಮಹಿಳಾ ಕಾಲೇಜಿನ ಜ್ಯೋತಿ ಟಿ ಕೆ (42.01.70 ನಿಮಿಷ) ಅವರು ಪಡೆದರು. ದ್ವಿತೀಯ ಸ್ಥಾನವನ್ನು ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಕಮಲಾಕ್ಷಿ ಕೆ.ಯು ಪಡೆದುಕೊಂಡರೆ ವಂದನಾ ಮಠ್ ಅವರು ತೃತೀಯ ಸ್ಥಾನವನ್ನು ಗಳಿಸಿದರು.
ವಿಶ್ವವಿದ್ಯಾಲಯ ತಂಡದ ಆಯ್ಕೆಯಲ್ಲಿ ಪ್ರಥಮ ಸ್ಥಾನವನ್ನು ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ದ್ವಿತೀಯ ಸ್ಥಾನ ಧಾರವಾಡದ ಕೆಎಸ್‍ಜೆ ಮಹಿಳಾ ಕಾಲೇಜು ಹಾಗೂ ತೃತೀಯ ಸ್ಥಾನವನ್ನು ಇಳಕಲ್ ಎಸ್ವಿಎಂ ಮಹಿಳಾ ವಿಶ್ವವಿದ್ಯಾಲಯವು ಪಡೆದುಕೊಂಡಿತು.