ಬಳ್ಳಾರಿ: ಕೇಂದ್ರ-ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸೋ ಮೂಲಕ ಜಾರಿಗೆ ತಂದಿರುವ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯಲ್ಲೇನಿದೆ ನನಗೆ ಗೊತ್ತಿಲ್ಲ. ನಾನು ಇಲ್ಲಿಗೆ ಫೇಸ್ ಮಾಸ್ಕ್, ಸ್ಯಾನಿಟೈಸರ್ ಹಂಚಿಕೆ ಮಾಡಲು ಬಂದಿರುವೆ ಎಂದು ಕಮ್ಮರಚೇಡು ಮಠದ ಕಲ್ಯಾಣ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಗಣಿನಗರಿ ಬಳ್ಳಾರಿಯ ಗಡಿಗಿ ಚನ್ನಪ್ಪ ವೃತ್ತದ ಬಳಿ ನೆರೆದಿದ್ದ ರೈತ, ಕನ್ನಡಪರ ಹಾಗೂ ಕಾರ್ಮಿಕ ಸಂಘಟನೆಗಳ ನೂರಾರು ಕಾರ್ಯಕರ್ತರಿಗೆ ಕರ್ನಾಟಕ ಜನಸೈನ್ಯ ಸಂಘಟನೆಯಿಂದ ಫೇಸ್ ಮಾಸ್ಕ್, ಸ್ಯಾನಿಟೈಸರ್ ಹಂಚಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದ್ರು.
ಕೋವಿಡ್ ಸೋಂಕು ಹರಡುವಿಕೆ ಹಿನ್ನೆಲೆಯಲ್ಲಿ ಫೇಸ್ಕ್ ಮಾಸ್ಕ್ ಹಾಗೂ ಸ್ಯಾನಿಟೈಸರ್ ಹಂಚಿಕೆ ಮಾಡಲು ನಾನು ಇಲ್ಲಿಗೆ ಬಂದಿರುವೆ. ನನಗೆ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಬಗ್ಗೆ ಗೊತ್ತಿಲ್ಲ. ಹೀಗಾಗಿ ಆ ಕುರಿತು ನಾನೇನೂ ಪ್ರತಿಕ್ರಿಯಿಸಲಾರೆ. ನಾನು ಯಾರೇ ಆಹ್ವಾನ ಮಾಡಿದ್ರೂ ಬರುವೆ. ಅದರಂತೆಯೇ ಇಲ್ಲಿಗೆ ನಾನು ಬಂದಿರುವೆ. ನಿಮ್ಮ ಹೋರಾಟಕ್ಕೆ ನನ್ನ ಸಹಮತವೂ ಇಲ್ಲ. ನಕಾರವೂ ಇಲ್ಲ. ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯಲ್ಲಿ ಏನಿದೆ ಎಂದು ನನಗೆ ಗೊತ್ತಿಲ್ಲ ಎಂದು ಕಲ್ಯಾಣ ಸ್ವಾಮೀಜಿ ಸ್ಪಷ್ಟಪಡಿಸಿದರು.
ಮಾಸ್ಕ್ ಧರಿಸಬೇಡಿ ಎಂದಿದ್ದ ಸ್ವಾಮೀಜಿಯಿಂದಲೇ ಮಾಸ್ಕ್ ವಿತರಣೆ: ಈ ಹಿಂದೆ ಫೇಸ್ ಮಾಸ್ಕ್ ಧರಿಸಬೇಡಿ ಎಂದಿದ್ದ ಕಲ್ಯಾಣ ಸ್ವಾಮೀಜಿಯವರು ಈಗ ಫೇಸ್ಕ್ ಮಾಸ್ಕ್ ಧರಿಸಿರಿ ಎಂದು ಜಾಗೃತಿ ಮೂಡಿಸುವ ಮೂಲಕ ವಿಶೇಷ ಗಮನ ಸೆಳೆದಿದ್ದಾರೆ.