ಬಳ್ಳಾರಿ: ಅನರ್ಹ ಶಾಸಕರಿಗೆ ಟಿಕೆಟ್ ನೀಡುವುದಾದ್ರೆ ನನ್ನದೇನು ತಕರಾರಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.
ಅವಂಬಾವಿ ಪ್ರದೇಶದ ತಮ್ಮ ನಿವಾಸದಲ್ಲಿಂದು ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರಿಗೆ ಟಿಕೆಟ್ ಕೊಡಬಾರದು ಅಂತ ನಾನೂ ಎಲ್ಲೂ ವಿರೋಧ ವ್ಯಕ್ತಪಡಿಸಿಲ್ಲ ಎಂದು ಹೇಳಿದ್ರು.
ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆ ಬೇಡವೆಂದು ಹೇಳಿದ್ದೆ ಅಷ್ಟೇ. ಜಿಲ್ಲೆಯ ಶಾಸಕರ ಸಭೆಯಲ್ಲಿ ಪ್ರತ್ಯೇಕ ಜಿಲ್ಲೆ ರಚನೆಗೆ ವಿರೋಧ ವ್ಯಕ್ತವಾಗಿದೆ. ಉಪಚುನಾವಣೆಯ ಬಳಿಕ ಮತ್ತೊಂದು ಸಭೆ ನಡೆಯಲಿದ್ದು, ಆಗ ಏನು ಚರ್ಚೆಯಾಗುತ್ತೆ ನೋಡೋಣ ಎಂದರು.
ನೆರೆ ಸಂತ್ರಸ್ತರ ಪರಿಹಾರಕ್ಕೆ ಹೆಚ್ಚಿನ ಅನುದಾನ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರ ಬಳಿ ನಿಯೋಗ ಕೊಂಡೊಯ್ಯುವುದಾಗಿ ತಿಳಿಸಿದ್ದಾರೆ. ಈಗಾಗಲೇ ಕೇಂದ್ರದಿಂದ 1,200 ಕೋಟಿ ರೂ ಗಳ ನೆರೆ ಪರಿಹಾರದ ಹಣ ಬಿಡುಗಡೆಯಾಗಿದೆ. ಮತ್ತಷ್ಟು ಅನುದಾನದ ಬರುವ ನಿರೀಕ್ಷೆಯಲ್ಲಿ ನಾವಿದ್ದೇವೆ ಎಂದು ತಿಳಿಸಿದ್ರು.