ETV Bharat / state

ನಾನಂತೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ, ಪಕ್ಷದ ನಿರ್ಧಾರಕ್ಕೆ ಬದ್ಧ: ಶ್ರೀರಾಮುಲು

ಸದ್ಯ ನಾನಂತೂ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಪಕ್ಷದ ವೇದಿಕೆಯಲ್ಲಿ ಶಾಸಕರಾದ ಆರ್. ಅಶೋಕ್​ ಮತ್ತು ನನ್ನ ಹೆಸರನ್ನ ಪ್ರಸ್ತಾಪಿಸಿದ್ದಾರೆ ಎಂಬ ಮಾಹಿತಿಯಿದೆ. ಹೀಗಾಗಿ, ನಮ್ಮ ಪಕ್ಷದ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೋ ಎಂಬುದನ್ನು ಕಾದು ನೋಡೋಣ ಎಂದ ಬಿ.ಶ್ರೀರಾಮುಲು.

ಬಿ.ಶ್ರೀರಾಮುಲು
author img

By

Published : May 4, 2019, 4:26 PM IST

ಬಳ್ಳಾರಿ: ನಾನಂತೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ನಿರ್ಧಾರ ಅಂತಿಮ. ಸದ್ಯ ನಾನಂತೂ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಪಕ್ಷದ ವೇದಿಕೆಯಲ್ಲಿ ಶಾಸಕರಾದ ಆರ್.ಅಶೋಕ್​ ಮತ್ತು ನನ್ನ ಹೆಸರನ್ನ ಪ್ರಸ್ತಾಪಿಸಿದ್ದಾರೆ ಎಂಬ ಮಾಹಿತಿಯಿದೆ. ಹೀಗಾಗಿ, ನಮ್ಮ ಪಕ್ಷದ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೋ ಎಂಬುದನ್ನು ಕಾದು ನೋಡೋಣ ಎಂದರು.

ಬಿ.ಶ್ರೀರಾಮುಲು

ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿ ಪರವಾದ ಅಲೆಯಿದೆ. ನಾಳೆಯಿಂದಲೇ ಈ ಎರಡೂ ಕ್ಷೇತ್ರಗಳಲ್ಲೂ ಪ್ರಚಾರ ಕಾರ್ಯ ಶುರು ಆಗಲಿದೆ. ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಉಪಾಧ್ಯಕ್ಷ ಶ್ರೀರಾಮುಲು ಸೇರಿದಂತೆ ರಾಜ್ಯದ ಇತರ ನಾಯಕರು ಉಭಯ ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಅವರೆಡೂ ಕ್ಷೇತ್ರಗಳಲ್ಲೂ ಕೂಡ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೇ 23ರ ಲೋಕಸಭಾ ಸಾರ್ವತ್ರಿಕ ಚುನಾವಣಾ ಫಲಿತಾಂಶ ಪ್ರಕಟ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ ಆಗುವ ಮುನ್ನವೇ ರಾಜ್ಯದ ಮೈತ್ರಿಕೂಟದ ಸರ್ಕಾರ ಪತನ ಆಗಲಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪ ಗೆಲುವು ಸಾಧಿಸಲಿದ್ದಾರೆ. ಕೇಂದ್ರದಲ್ಲಿ ಮತ್ತೊಮ್ಮೆ ಎನ್​ಡಿಎ ನೇತೃತ್ವದ ಸರ್ಕಾರ ರಚನೆಯಾಗಲಿದೆ.‌ ರಾಜ್ಯದ 22 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.

ರಮೇಶ್​ ಹೇಳಿಕೆ ನಿಜವಾಗಬಹುದು:

ಶಾಸಕ ರಮೇಶ್​ ಜಾರಕಿಹೊಳಿ ಹೇಳಿಕೆಗಳನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿರುವೆ.‌ ಮಾಜಿಗಳು ಹಾಲಿ ಆಗಬಹುದು. ಹಾಲಿ ಸಚಿವರುಗಳು ಮಾಜಿಗಳಾಗುವ ಕಾಲ ಸನ್ನಿಹಿತವಾಗಿದೆ ಎಂಬ ಶಾಸಕ ರಮೇಶ್​ ಅವರ ಹೇಳಿಕೆಯೂ ನಿಜವಾಗಬಹುದು. ರಮೇಶ್​ ಅವರ ಬೆನ್ನ ಹಿಂದೆ ಅನೇಕ ಭಿನ್ನಮತೀಯ ಶಾಸಕರಿದ್ದಾರಂತ ಕಾಣಿಸುತ್ತೆ. ಹೀಗಾಗಿ, ಮೇ 23ರ ನಂತರ ರಾಜಕೀಯ ಧ್ರುವೀಕರಣವೇ ಆಗಬಹುದು ಎಂದರು.

Intro:ನಾನಂತೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ!
ಬಳ್ಳಾರಿ: ನಾನಂತೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಸ್ಪಷ್ಟ ಪಡಿಸಿದ್ದಾರೆ.
ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ನಿರ್ಧಾರ ಅಂತಿಮ. ಸದ್ಯ ನಾನಂತೂ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಪಕ್ಷದ ವೇದಿಕೆಯಲ್ಲಿ ಶಾಸಕರಾದ ಆರ್.ಅಶೋಕ ಮತ್ತು ನನ್ನ (ಶ್ರೀರಾಮುಲು) ಹೆಸರನ್ನ ಪ್ರಸ್ತಾಪಿಸಿದ್ದಾರೆ ಎಂಬ ಮಾಹಿತಿಯಿದೆ. ಹೀಗಾಗಿ, ನಮ್ಮ ಪಕ್ಷದ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತ ದೋ ಎಂಬುದನ್ನು ಕಾದು ನೋಡೋಣ ಎಂದರು.
ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿ ಪರವಾದ ಅಲೆಯಿದೆ. ನಾಳೆ ಯಿಂದಲೇ ಈ ಎರಡೂ ಕ್ಷೇತ್ರಗಳಲ್ಲೂ ಪ್ರಚಾರಕಾರ್ಯ ಶುರು ಆಗಲಿದೆ. ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿ ಯೂರಪ್ಪ, ಉಪಾಧ್ಯಕ್ಷರಾದ ಶ್ರೀರಾಮುಲು ಸೇರಿದಂತೆ ಇತರೆ ರಾಜ್ಯದ ನಾಯಕರು ಉಭಯ ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಳ್ಳ ಲಿದ್ದಾರೆ. ಅವರೆಡೂ ಕ್ಷೇತ್ರಗಳಲ್ಲೂ ಕೂಡ ಬಿಜೆಪಿ ಅಭ್ಯರ್ಥಿ ಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿ ದ್ದಾರೆ.

Body:ಮೇ 23ರ ಲೋಕಸಭಾ ಸಾರ್ವತ್ರಿಕ ಚುನಾವಣಾ ಫಲಿತಾಂಶ ಪ್ರಕಟ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ ಆಗುವ ಮುನ್ನವೇ ರಾಜ್ಯದ ಮೈತ್ರಿಕೂಟದ ಸರ್ಕಾರ ಪತನ ಆಗಲಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲಿ
ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪ ಗೆಲುವು ಸಾಧಿಸಲಿದ್ದಾರೆ. ಕೇಂದ್ರದಲ್ಲಿ ಮತ್ತೊಮ್ಮೆ ಎನ್ ಡಿಎ ನೇತೃತ್ವದ ಸರ್ಕಾರ ರಚನೆಯಾಗಲಿದೆ.‌ ರಾಜ್ಯದ 22 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.
ರಮೇಶ ಹೇಳಿಕೆ ನಿಜವಾಗಬಹುದು: ಶಾಸಕ ರಮೇಶ ಜಾರಕಿಹೊಳಿ ಹೇಳಿಕೆಗಳನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿರುವೆ.‌ ಮಾಜಿಗಳು ಹಾಲಿ ಆಗಬಹುದು.
ಹಾಲಿ ಸಚಿವರುಗಳು ಮಾಜಿಗಳು ಆಗುವ ಕಾಲ ಸನ್ನಿಹಿತವಾಗಿದೆ ಎಂಬ ಶಾಸಕ ರಮೇಶ ಅವರ
ಹೇಳಿಕೆಯೂ ನಿಜವಾಗ್ಲೂಬಹುದು. ರಮೇಶ ಅವರ
ಬೆನ್ನಹಿಂದೆ ಅನೇಕ ಭಿನ್ನಮತೀಯ ಶಾಸಕರಿದ್ದಾರಂತಾ ಕಾಣಿಸುತ್ತೆ. ಹೀಗಾಗಿ, ಮೇ. 23ರ ನಂತರ ರಾಜಕೀಯ ಧ್ರುವೀಕರಣವೇ ಆಗಬಹುದು ಎಂದರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_01_04_BJP_MLA_SREE_RAMULU_BYTE_7203310

KN_BLY_01a_04_BJP_MLA_SREE_RAMULU_BYTE_7203310

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.