ಬಳ್ಳಾರಿ: ನನಗೆ ಸಚಿವ ಸ್ಥಾನ ಕೊಟ್ಟರೆ ಅತ್ಯಂತ ಜವಾಬ್ದಾರಿಯಿಂದ ನಿಭಾಯಿಸುವೆ ಎಂದು ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಹೇಳಿದ್ರು.
'ಕಾರ್ಗಿಲ್ ವಿಜಯ್ ದಿವಸ್' ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಶಾಸಕ ರೆಡ್ಡಿ ಸುದ್ದಿಗಾರರೊಂದಿಗೆ ಮಾತನಾಡಿ, ಆ ತಾಯಿ ಭುವನೇಶ್ವರಿ, ಬಳ್ಳಾರಿಯ ಕನಕ ದುರ್ಗಮ್ಮನ ಆರ್ಶೀವಾದದಿಂದ ನನಗೆ ಸಚಿವ ಸ್ಥಾನ ದೊರೆತರೆ ನೋಡೋಣ. ಅದನ್ನು ನಾನು ಅತ್ಯಂತ ಜವಾಬ್ದಾರಿಯಿಂದ ನಿಭಾಯಿಸುವೆ. ಸದ್ಯ ನಾನಂತೂ ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ತಿಳಿಸಿದ್ರು.
ಬಿಎಸ್ ವೈ ಪ್ರಮಾಣ ವಚನ ಸ್ವೀಕಾರ ಸಂತಸ ತಂದಿದೆ:
ಪಕ್ಷದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆ 6 ಗಂಟೆಗೆ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ನನಗೆ ಖುಷಿ ತಂದಿದೆ. ಇನ್ನು ಮುಂದೆ ಅಭಿವೃದ್ಧಿಯತ್ತ ಕರ್ನಾಟಕ ಸಾಗಲಿದೆ ಎಂದು ರೆಡ್ಡಿ ಹರ್ಷ ವ್ಯಕ್ತಪಡಿಸಿದ್ರು. ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಅವರು ಪಕ್ಷದ ಪ್ರಬಲ ನಾಯಕ. ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ವಿಚಾರವು ಮೊದಲಿನಿಂದಲೂ ಇದೆ. ಹೀಗಾಗಿ ಶ್ರೀರಾಮುಲು ಅವರು ಡಿಸಿಎಂ ಆಗಲು ಸಮರ್ಥರಿದ್ದಾರೆ ಎಂದು ಹೇಳುವ ಮೂಲಕ ಮಂತ್ರಿಗಿರಿಗೆ ಲಾಬಿ ನಡೆಸಿದ್ರು.