ETV Bharat / state

ಅನಧಿಕೃತ ಕೀಟನಾಶಕಗಳ ಮಾರಾಟ : ನೋಟಿಸ್ ಜಾರಿ

author img

By

Published : Sep 25, 2020, 10:50 PM IST

ಬಳ್ಳಾರಿಯಲ್ಲಿ ಅನಧಿಕೃತವಾಗಿ ಕೀಟನಾಶಕಗಳನ್ನು ಮಾರಾಟ ಮಾಡುತ್ತಿದ್ದ ಮಳಿಗೆಗಳಿಗೆ ಕೃಷಿ ಇಲಾಖಾ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.

Bellary
Bellary

ಬಳ್ಳಾರಿ: ನಗರ ಮತ್ತು ಕುರುಗೋಡು ಹೋಬಳಿಯ ವಿವಿಧ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿದ ಕೃಷಿ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಈ ವೇಳೆ, ಅನಧಿಕೃತವಾಗಿ ಕೀಟನಾಶಕಗಳನ್ನು ಮಾರಾಟ ಮಾಡುತ್ತಿದ್ದವರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಸೆ.22 ಮತ್ತು 23ರಂದು ಕೃಷಿ ಇಲಾಖೆಯ ಬೆಳಗಾವಿ ಜಾಗೃತ ಕೋಶ ವಿಭಾಗದ ಉಪ ಕೃಷಿ ನಿರ್ದೇಶಕರು (ಜಾರಿದಳ), ಸಹಾಯಕ ಕೃಷಿ ನಿರ್ದೇಶಕರು (ಜಾರಿ ದಳ) ಅವರ ನೇತೃತ್ವದಲ್ಲಿ ನಗರ ಮತ್ತು ಕುರುಗೋಡು ಹೋಬಳಿಯ ವಿವಿಧ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿದ್ದರು.

ಈ ವೇಳೆ, ಕೀಟನಾಶಕ ಕಾಯ್ದೆ 1968ರಡಿ ನೋಂದಾಯಿತವಲ್ಲದ ಕೀಟನಾಶಕಗಳನ್ನು ಮಾರಾಟ ಮಾಡುತ್ತಿದ್ದವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ನೊಂದಾಯಿತವಲ್ಲದೇ ಕೀಟನಾಶಕಗಳ ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಹಾಯಕ ಕೃಷಿ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲೆಯ ಉಪವಿಭಾಗ-1 ರ ಉಪ ಕೃಷಿ ನಿದೇಶಕರು, ಸಹಾಯಕ ಕೃಷಿ ನಿರ್ದೇಶಕರು (ಜಾರಿದಳ-1 & ಜಾರಿದಳ-2), ಸಹಾಯಕ ಕೃಷಿ ನಿರ್ದೇಶಕರು, ತಾಲೂಕು ರೈತ ಸಂಪರ್ಕ ಕೇಂದ್ರ ಕೃಷಿ ಅಧಿಕಾರಿಗಳು ಈ ತಪಾಸಣೆಯಲ್ಲಿ ಪಾಲ್ಗೊಂಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.