ETV Bharat / state

ನೆರೆ ನಿರಾಶ್ರಿತರಿಗೆ ತಕ್ಷಣ ಪರಿಹಾರ: ಸಿ‌ಎಂ ಬಿಎಸ್​​ವೈ ಭರವಸೆ

ಇದುವರೆಗೆ ನೆರೆಯಿಂದ ಯಾವುದೇ ರೀತಿಯ ಅನಾಹುತಗಳಾಗಿಲ್ಲ. ಅನಾಹುತಗಳನ್ನು ತಡೆಯಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಮತ್ತು ಪರಿಹಾರ ತಂಡಗಳು ಕಾರ್ಯಪ್ರವೃತ್ತವಾಗಿವೆ. ಇನ್ನು ನೆರೆ ನಿರಾಶ್ರಿತರಿಗೆ ತಕ್ಷಣ ಪರಿಹಾರ ನೀಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಸಿಎಂ ಬಿ.ಎಸ್. ಯಡಿಯೂರಪ್ಪ
author img

By

Published : Aug 5, 2019, 12:00 PM IST

ಬಳ್ಳಾರಿ: ನೆರೆ ನಿರಾಶ್ರೀತರಿಗೆ ತಕ್ಷಣ ಅಗತ್ಯ ಪರಿಹಾರ ನೀಡಲಾಗುವುದು. ಅವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ನೆರೆಯಿಂದ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆಗಾಗಿ ವಿಮಾನದ ಮೂಲಕ ಬಳ್ಳಾರಿ ಸಮೀಪದ ತೋರಣಗಲ್ಲುವಿನ ಜಿಂದಾಲ್ ಏರ್ ಸ್ಟ್ರೀಪ್​​​ಗೆ ಆಗಮಿಸಿ ಗೌರವ ವಂದನೆ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರೆಗೆ ನೆರೆಯಿಂದ ಯಾವುದೇ ರೀತಿಯ ಅನಾಹುತಗಳಾಗಿಲ್ಲ. ಅನಾಹುತಗಳನ್ನು ತಡೆಯಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಮತ್ತು ಪರಿಹಾರ ತಂಡಗಳು ಕಾರ್ಯಪ್ರವೃತ್ತವಾಗಿವೆ ಎಂದಿದ್ದಾರೆ.

ರಾಜ್ಯದಲ್ಲಿ ಒಂದೆಡೆ ನೆರೆ ಮತ್ತೊಂದೆಡೆ ಬರಗಾಲ‌ ಆವರಿಸಿದೆ. ಬಳ್ಳಾರಿ ಭಾಗದಲ್ಲಿ ಮತ್ತು ಮಲೆನಾಡಿನ ಶಿವಮೊಗ್ಗದ ಭಾಗದಲ್ಲಿ ಮಳೆ ಇಲ್ಲವಾಗಿದೆ. ಮತ್ತೊಂದೆಡೆ ನೆರೆಹಾವಳಿ ಉಂಟಾಗಿದೆ. ಈ ಎರಡು ಸನ್ನಿವೇಶಗಳನ್ನು ನಿರ್ವಹಿಸಲು ಸರ್ಕಾರ ಬದ್ಧವಾಗಿದೆ ಎಂದರು. ಕೃಷ್ಣಾ ನದಿಗೆ ಅತ್ಯಧಿಕವಾಗಿ ನೀರು ಹರಿದು ಬಂದ ಕಾರಣ ಆಲಮಟ್ಟಿ ಜಲಾಶಯದಿಂದ 2.11 ಲಕ್ಷ ಕ್ಯೂಸೆಕ್ ಮತ್ತು ನಾರಾಯಣಪುರ ಜಲಾಶಯದಿಂದ 2 ಲಕ್ಷ ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ ಎಂದು ಮಾಹಿತಿ ನೀಡಿದರು.

ಸಿಎಂ ಬಿ.ಎಸ್.ಯಡಿಯೂರಪ್ಪ

ಇದಕ್ಕೂ ಮುಂಚೆ ಅವರು ಬಳ್ಳಾರಿ ಜಿಲ್ಲಾಧಿಕಾರಿಗಳು‌ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲೆಯ ಬರ ಹಾಗೂ ಇನ್ನಿತರ ಅಭಿವೃದ್ಧಿ ಕಾರ್ಯಗಳ ಸ್ಥಿತಿಗತಿ ಮತ್ತು ಮಾಹಿತಿ ಪಡೆದುಕೊಂಡರು. ನಂತರ ಅವರು ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ನೆರೆಯಿಂದ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆಗೆ ತೆರಳಿದರು.

Intro:ನೆರೆ ನಿರಾಶ್ರಿತರಿಗೆ ತಕ್ಷಣ ಪರಿಹಾರ: ಸಿ‌ಎಂ ಬಿಎಸ್ವೈ

ನೆರೆ ನಿರಾಶ್ರೀತರಿಗೆ ತಕ್ಷಣ ಅಗತ್ಯ ಪರಿಹಾರ ನೀಡಲಾಗುವುದು. ಅವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಸಿಎಂ ಬಿಎಸ್ ವೈ ಹೇಳಿದ್ದಾರೆ.
Body:ನೆರೆಯಿಂದ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆಗಾಗಿ ವಿಮಾನದ ಮೂಲಕ ಬಳ್ಳಾರಿ ಸಮೀಪದ ತೋರಣಗಲ್ಲುವಿನ ಜಿಂದಾಲ್ ಏರ್ ಸ್ಟ್ರೀಪ್ ಗೆ ಸೋಮವಾರ ಆಗಮಿಸಿ ಗೌರವ ವಂದನೆ ಸ್ವೀಕರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಇದುವರೆಗೆ ನೆರೆಯಿಂದ ಯಾವುದೇ ರೀತಿಯ ಅನಾಹುತಗಳಾಗಿಲ್ಲ. ಅನಾಹುತಗಳನ್ನು ತಡೆಯಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಮತ್ತು ಪರಿಹಾರ ತಂಡಗಳು ಮತ್ತು ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ರಾಜ್ಯದಲ್ಲಿ ಒಂದೇಡೆ ನೆರೆ ಮತ್ತೊಂದೆಡೆ ಬರಗಾಲ‌ ಆವರಿಸಿ ವಿಪರ್ಯಾಸದ ಸನ್ನಿವೇಶ ಏರ್ಪಟ್ಟಿದೆ. ಬಳ್ಳಾರಿ ಭಾಗದಲ್ಲಿ ಮತ್ತು ಮಲೆನಾಡಿನ ಶಿವಮೊಗ್ಗದ ಭಾಗದಲ್ಲಿ ಮಳೆ ಇಲ್ಲವಾಗಿದೆ. ಮತ್ತೊಂದೆಡೆ ನೆರೆಹಾವಳಿ ಉಂಟಾಗಿದೆ. ಈ ಎರಡು ಸನ್ನಿವೇಶಗಳನ್ನು ನಿರ್ವಹಿಸಲು ಸರಕಾರ ಬದ್ದವಾಗಿದೆ ಎಂದರು.
ಕೃಷ್ಣಾ ನದಿಗೆ ಅತ್ಯಧಿಕವಾಗಿ ನೀರು ಹರಿದು ಬಂದ ಕಾರಣ ಆಲಮಟ್ಟಿ ಜಲಾಶಯದಿಂದ 2.11ಲಕ್ಷ ಕ್ಯೂಸೆಕ್ ಮತ್ತು ನಾರಾಯಣಪುರ ಜಲಾಶಯದಿಂದ 2ಲಕ್ಷ ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ ಎಂದು ಮಾಹಿತಿ ನೀಡಿದರು.
ಇದಕ್ಕೂ ಮುಂಚೆ ಅವರು ಬಳ್ಳಾರಿ ಜಿಲ್ಲಾಧಿಕಾರಿಗಳು‌ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲೆಯ ಬರ ಹಾಗೂ ಇನ್ನೀತರ ಅಭಿವೃದ್ಧಿ ಕಾರ್ಯಗಳ ಸ್ಥಿತಿಗತಿ ಮತ್ತು ಮಾಹಿತಿಯನ್ನು ಪಡೆದುಕೊಂಡರು.
ನಂತರ ಅವರು ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ನೆರೆಯಿಂದ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆಗೆ ತೆರಳಿದರು.
Conclusion:ಶಾಸಕ ಸೋಮಶೇಖರ್ ರೆಡ್ಡಿ , ಜಿಪಂ‌ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ ಸೇರಿದಂತೆ ಅನೇಕರು ಇದ್ದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.