ETV Bharat / state

ಕೊರೊನಾ ಮೃತರ ಸಂಖ್ಯೆ ಹೆಚ್ಚಳಕ್ಕೆ ನಿರ್ಲಕ್ಷವೇ ಕಾರಣ: ಡಿವೈಎಫ್​ಐ ಆರೋಪ

ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾದಿಂದ ಮೃತರ ಸಂಖ್ಯೆ ಹೆಚ್ಚಳವಾಗಿದ್ದು, ಇದಕ್ಕೆ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳ ವೈಫಲ್ಯವೇ ಕಾರಣ ಎಂದು ಡಿವೈಎಫ್​ಐ (ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್) ಆರೋಪಿಸಿದೆ.

DYFI state voice president b.mahesh
ಡಿವೈಎಫ್ಐ ರಾಜ್ಯ ಘಟಕದ ಉಪಾಧ್ಯಕ್ಷ ಬಿಸಾಟಿ ಮಹೇಶ್
author img

By

Published : Aug 27, 2020, 10:51 PM IST

ಹೊಸಪೇಟೆ: ಜಿಲ್ಲೆಯಲ್ಲಿ ಪ್ರತಿ ದಿನ ಕೊರೊನಾ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕಿತರು ಹೆಚ್ಚುತ್ತಿದ್ದಾರೆ. ಇದಕ್ಕೆ ಜಿಲ್ಲಾಡಳಿತ ಹಾಗೂ ಉಸ್ತುವಾರಿ ಸಚಿವ, ಆರೋಗ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಡಿವೈಎಫ್ಐ ರಾಜ್ಯ ಘಟಕದ ಉಪಾಧ್ಯಕ್ಷ ಬಿಸಾಟಿ ಮಹೇಶ್ ಆರೋಪಿಸಿದರು.

DYFI state voice president b.mahesh
ಡಿವೈಎಫ್ಐ ರಾಜ್ಯ ಘಟಕದ ಉಪಾಧ್ಯಕ್ಷ ಬಿಸಾಟಿ ಮಹೇಶ್

ಕೊರೊನಾ ಸೋಂಕಿನಿಂದ ಜಿಲ್ಲಾ ಆಸ್ಪತ್ರೆಗೆ ದಾಖಲಾದ ಸೋಂಕಿತರು ಗುಣಮುಖರಾಗದೇ ಸಾವನ್ನಪ್ಪುತ್ತಿದ್ದಾರೆ. ಆದರೆ, ಜಿಲ್ಲಾಡಳಿತ ಇದೆಲ್ಲವೂ ಸಹಜ ಎಂಬಂತೆ ವರ್ತಿಸುತ್ತಿರುವುದು ಖಂಡನೀಯ. ಜಿಲ್ಲಾಸ್ಪತ್ರೆಯಲ್ಲಿ ನುರಿತ ವೈದ್ಯರಿದ್ದಾಗಲೂ ಸಹ ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಕಾರಣವನ್ನು ಜಿಲ್ಲಾಡಳಿತ ತಿಳಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸೋಂಕಿನಿಂದ ಮೃತಪಟ್ಟ ಪ್ರಕರಣಗಳನ್ನು ಗಮನಿಸಿದರೆ‌‌ ಕೊರೊನಾ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂಬುದು ತಿಳಿಯುತ್ತಿದೆ. ರೋಗಿಗಳಿಗೆ ಇತರೆ ಕಾಯಿಲೆಗಳಿದ್ದು, ಆ ರೋಗಿಗಳಿಗೆ ಕೊರೊನಾ ಪಾಸಿಟಿವ್ ಬಂದರೆ ಅದಕ್ಕೂ ಚಿಕಿತ್ಸೆ ನೀಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ ಎಂದು ಆರೋಪಿಸಿದರು.

ಮುಖಂಡರಾದ ವಿ. ಸ್ವಾಮಿ, ಈ. ಮಂಜುನಾಥ ಕಲ್ಯಾಣಯ್ಯ, ಕಿನ್ನಾಳ್ ಹನುಮಂತ ಇನ್ನಿತರರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.