ಬಳ್ಳಾರಿ: ಜಿಲ್ಲೆಯ ಕೋವಿಡ್-19 ಆಸ್ಪತ್ರೆಯ ಡಿ ಗ್ರೂಪ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಮೇ. 28 ರಿಂದ ಜೂನ್ 9 ರವರೆಗೆ ಐಸೋಲೇಷನ್ ವಾರ್ಡ್ನಲ್ಲಿ, 27 ವರ್ಷದ ಡಿ ಗ್ರೂಪ್ ನೌಕರ ಕಾರ್ಯನಿರ್ವಹಿಸಿದ್ದ.
ಬಳಿಕ ಆತನ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಲ್ಯಾಬ್ ರಿಪೋರ್ಟ್ನಲ್ಲಿ ಕೊರೊನಾ ಸೋಂಕು ತಗುಲಿರುವುದು ಧೃಡವಾಗಿದೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್. ಎಸ್. ನಕುಲ್ ಹೇಳಿದ್ದಾರೆ.