ETV Bharat / state

ಒಂದೇ ದಿನದಲ್ಲಿ ತುಂಗಾಭದ್ರಾ ಜಲಾಶಯಕ್ಕೆ ಹರಿದು ಬಂತು 4 ಟಿಎಂಸಿ ನೀರು! - Tungabhadra Inflow increases

ತುಂಗಭದ್ರಾ ಜಲಾಶಯಕ್ಕೆ ಒಂದು ದಿನ ನಾಲ್ಕು ಟಿಎಂಸಿ ನೀರು ಹರಿದು ಬಂದಿದೆ. ಸದ್ಯ ಜಲಾಶಯದಲ್ಲಿ 41.834 ಟಿಎಂಸಿ ನೀರು ಸಂಗ್ರಹವಾಗಿದೆ.

Tungabhadra Inflow increases
ತುಂಗಾಭದ್ರಾ ಒಳ ಹರಿವು ಹೆಚ್ಚಳ
author img

By

Published : Jul 17, 2021, 10:13 AM IST

ಹೊಸಪೇಟೆ (ವಿಜಯನಗರ) : ತುಂಗಭದ್ರಾ ಜಲಾಶಯದ ಒಳ ಹರಿವಿನಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಒಂದೇ ದಿನದಲ್ಲಿ ನಾಲ್ಕು ಟಿಎಂಸಿ ನೀರು ಹರಿದು ಬಂದಿದೆ. ಪ್ರಸ್ತುತ ಜಲಾಶಯದಲ್ಲಿ 41.834 ಟಿಎಂಸಿ ನೀರು ಸಂಗ್ರಹವಾಗಿದೆ.

ಇಂದು (ಶನಿವಾರ) ಬೆಳಗ್ಗೆ ಜಲಾಶಯಕ್ಕೆ 46,054 ಕ್ಯೂಸೆಕ್ ನೀರು ಒಳ ಹರಿವು ದಾಖಲಾಗಿದೆ. ಹಾಗಾಗಿ, ನೀರಿನ ಸಂಗ್ರಹ ಮಟ್ಟ ಒಂದೇ ದಿನಕ್ಕೆ ಹೆಚ್ಚಾಗಿದೆ. ಪ್ರಸಕ್ತ ವರ್ಷದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ನೀರು ಹರಿದು ಬಂದಿದ್ದು, ಇದೇ ಮೊದಲು.

ಓದಿ : ತುಂಗಭದ್ರಾ ಜಲಾಶಯದಲ್ಲಿ ಕಳೆದ ಬಾರಿಗಿಂತ 13 ಟಿಎಂಸಿ ಹೆಚ್ಚು ನೀರು ಸಂಗ್ರಹ

ಜಲಾಶಯ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಒಳಹರಿವು ಪ್ರಮಾಣ ಹೆಚ್ಚಳವಾಗಿದೆ‌. ಜಲಾಶಯದಲ್ಲಿ 41.8344 ಟಿಎಂಸಿ ನೀರು ಸಂಗ್ರಹವಾಗಿದೆ‌. ನಿನ್ನೆ ( ಶುಕ್ರವಾರ) 37.897 ಟಿಎಂಸಿ ನೀರು ಸಂಗ್ರಹವಾಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.