ಹೊಸಪೇಟೆ: ನಗರದ ಅಂತಾರಾಷ್ಟ್ರೀಯ ವೇಟ್ ಲಿಫ್ಟರ್ ಕಿಚಡಿ ದಯಾನಂದ (55) ಕೊರೊನಾಗೆ ಇಂದು ಬಲಿಯಾಗಿದ್ದಾರೆ.
25 ದಿನಗಳ ಹಿಂದೆ ಕಾಶ್ಮೀರಕ್ಕೆ ಸ್ಪರ್ಧೆಯಲ್ಲಿ ಭಾಗಿಯಾಗಲು ತೆರಳಿದ್ದರು. ಒಂದು ವಾರದ ಹಿಂದೆ ಅವರಿಗೆ ಕೊರೊನಾ ದೃಢಪಟ್ಟಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ದಯಾನಂದ ಅವರು ಪತ್ನಿ ಹಾಗೂ ಒಬ್ಬ ಪುತ್ರ ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದಾರೆ.
ಇದನ್ನೂ ಓದಿ: ಭಾರತದಲ್ಲಿ ಕೋವಿಡ್ ಎರಡನೇ ಅಲೆ: ನಾವು ಎಡವಿದ್ದೆಲ್ಲಿ ಗೊತ್ತಾ?