ಬಳ್ಳಾರಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಯೋಗಾಭ್ಯಾಸ ನಡೆಯಿತು. ಡಿಸಿ, ಎಸ್ಪಿ, ಸಿಇಒ ಸೇರಿದಂತೆ ಇತರೆ ಜಿಲ್ಲಾಮಟ್ಟದ ಅಧಿಕಾರಿಗಳು, ಮಕ್ಕಳು, ಸಾರ್ವಜನಿಕರು ಯೋಗಾಭ್ಯಾಸ ಮಾಡಿದರು.
ಈ ವೇಳೆ ಜಿಲ್ಲಾಧಿಕಾರಿ ನಕುಲ್ ಮಾತನಾಡಿ, ಪ್ರತಿಯೊಬ್ಬರು ಯೋಗಾಭ್ಯಾಸದಲ್ಲಿ ಸಕ್ರಿಯರಾಗಬೇಕು. ಇಡಿ ವಿಶ್ವವೇ ಈ ದಿನ ಯೋಗದಲ್ಲಿ ಮಿಂದೇಳಲಿದೆ. ಯೋಗ ಮಾಡುವುದರಿಂದ ಅನೇಕ ಲಾಭಗಳಿವೆ. ಪ್ರತಿನಿತ್ಯ ಮನೆಯಲ್ಲಿ ಕೂಡ ಯೋಗ ಮಾಡಬೇಕು ಎಂದು ಹೇಳಿದರು.
ಯೋಗದಲ್ಲಿ ಭಾಗಿಯಾದ ವಿದ್ಯಾರ್ಥಿಗಳು:
ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನೂರಾರು ನರ್ಸಿಂಗ್ ಕೋರ್ಸ್ ವಿದ್ಯಾರ್ಥಿನಿಯರು ಹಾಗೂ ಕಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರು ಯೋಗಾಭ್ಯಾಸದಲ್ಲಿ ಪಾಲ್ಗೊಂಡು ಗಮನ ಸೆಳೆದರು.
ನನ್ನಾರಿ ಪಾನೀಯ ವಿತರಣೆ:
ಆಯುಷ್ ಇಲಾಖೆಯಿಂದ ಯೋಗಾಭ್ಯಾಸದಲ್ಲಿ ತೊಡಗಿಕೊಂಡ ಪ್ರತಿಯೊಬ್ಬರಿಗೂ ನನ್ನಾರಿ ಪಾನೀಯ ವಿತರಿಸಲಾಯಿತು.