ಬಳ್ಳಾರಿ: ನಗರದ ಕೌಲ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಗಳ್ಳತನ ಮಾಡುತ್ತಿದ್ದ ಓರ್ವ ಅಂತರರಾಜ್ಯ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.
ಕುರುಬರ ನಾಗರಾಜ್ (49) ಬಂಧಿತ ಆರೋಪಿ. ಈತ ಕೌಲ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ 6 ಹಾಗೂ ಗ್ರಾಮಾಂತರದ ಪ್ರದೇಶದ 1 ಮನೆಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ. ಆರೋಪಿಗಾಗಿ ಬಲೆ ಬೀಸಿದ ಪೊಲೀಸರು, ಇಂದು ತಿಲಕ್ ನಗರದಲ್ಲಿ ಬಂಧಿಸಿದ್ದಾರೆ. ಬಂಧಿತನಿಂದ 16 ಲಕ್ಷದ 25 ಸಾವಿರದ 50 ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿಯನ್ನು ವಶಕ್ಕೆ ಪಡೆಯಲಾಗಿದೆ.
ಓದಿ: ನಕಲಿ ದಾಖಲೆ ಸೃಷ್ಟಿಸಿ ಕಟ್ಟಡ ಮಾರಾಟ; ಉಪನೋಂದಣಾಧಿಕಾರಿ ಸೇರಿ ಇಬ್ಬರು ಅರೆಸ್ಟ್