ETV Bharat / state

ಹತ್ರಾಸ್​​ನಲ್ಲಿ ನಡೆದ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಈಶ್ವರ್​ ಖಂಡ್ರೆ ಬೇಸರ - Ishwar Khandre spoke about hathras rape case

ಬಿಜೆಪಿಯವರು ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಅವರಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ ಎಂದು ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬೇಸರ ವ್ಯಕ್ತಪಡಿಸಿದ್ದಾರೆ.

Ishwar Khandre
ಈಶ್ವರ್​ ಖಂಡ್ರೆ
author img

By

Published : Oct 1, 2020, 5:58 PM IST

Updated : Oct 1, 2020, 6:28 PM IST

ಹೊಸಪೇಟೆ: ಉತ್ತರಪ್ರದೇಶದ ಹತ್ರಾಸ್ ನಲ್ಲಿ​ ದಲಿತ ಯುವತಿಯನ್ನು ಅತ್ಯಾಚಾರ ಮಾಡಿ, ಕೊಲೆ ಮಾಡಲಾಗಿದೆ. ಅಲ್ಲದೇ, ಕುಟುಂಬದವರ ಅನುಮತಿ ಇಲ್ಲದೆಯೇ ರಾತ್ರೋ ರಾತ್ರಿ‌ ಪೊಲೀಸರು ಮೃತದೇಹವನ್ನು ಸುಟ್ಟಿದ್ದಾರೆ. ಇದು ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ ಎಂದು ಶಾಸಕ ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬೇಸರ ವ್ಯಕ್ತಪಡಿಸಿದರು.

ಈಶ್ವರ್​ ಖಂಡ್ರೆ

ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ಭೇಟಿ ಪಡಾವೋ, ಭೇಟಿ ಬಚಾವೋ ಯೋಜನೆ ಸ್ಲೋಗನ್ ಗೆ ಸಿಮೀತವಾಗಿದೆ. ಬಿಜೆಪಿಯಿಂದ ಮಹಿಳೆಯರನ್ನು ರಕ್ಷಣೆ ಮಾಡುವಂತಹ ಪರಿಸ್ಥಿತಿ ಬಂದಿದೆ. ಮಹಿಳೆ ದೂರು‌ ನೀಡಿದರೂ ಸಹ ಒಂದು ವಾರದ ಬಳಿಕ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉತ್ತರಪ್ರದೇಶದಲ್ಲಿ ಯುವತಿ ಕುಟುಂಬಕ್ಕೆ ಸ್ವಾಂತನ‌ ಹೇಳಲು ತೆರಳಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ‌ ಹಾಗೂ ಪ್ರಿಯಾಂಕ ವಾದ್ರಾ ಅವರನ್ನು ತಡೆಯಲಾಗಿದೆ. ಅಲ್ಲದೇ, ರಾಹುಲ್ ಗಾಂಧಿ ಮೇಲೆ ಹಲ್ಲೆ ಮಾಡಿ ಅವರನ್ನು ಬಂಧಿಸಿದ್ದಾರೆ ಎಂದರು.

ಬಿಜೆಪಿಯವರು ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಅವರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲಾಗುತ್ತಿದೆ. ತಕ್ಷಣ ಉತ್ತರಪ್ರದೇಶದಲ್ಲಿ ರಾಷ್ಟ್ರಪತಿ ಅವರು ಯೋಗಿ ಆದಿತ್ಯನಾಥರ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

Last Updated : Oct 1, 2020, 6:28 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.