ಬಳ್ಳಾರಿ : ದಕ್ಷಿಣ ಭಾರತದ ಎಲ್ಲಾ ರಾಜ್ಯಗಳ ಮೇಲೆ ಹಿಂದಿ ಭಾಷೆ ಹೇರಿಕೆ ಖಂಡಿಸಿ ಜನಸೇನೆ ಸಂಘಟನೆ ರಾಜ್ಯಾಧ್ಯಕ್ಷ ಕೆ ಎರ್ರಿಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇಂದು ಕನ್ನಡಪರ ಸಂಘಟನೆ ಜನಸೇನೆ ರಾಜ್ಯಾಧ್ಯಕ್ಷ ಕೆ. ಏರ್ರಿಸ್ವಾಮಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ನಂತರ ಅಪರ ಜಿಲ್ಲಾಧಿಕಾರಿ ಮಂಜುನಾಥ ಅವರಿಗೆ ಮನವಿ ಸಲ್ಲಿಸಿದರು.
ಕೇಂದ್ರ ಸರ್ಕಾರ ಪ್ರತಿ ವರ್ಷ ಸೆಪ್ಟೆಂಬರ್ 14ರಂದು ಹಿಂದಿ ದಿವಸ್ ಎಂದು ಆಚರಣೆ ಮಾಡುತ್ತಿರುವುದು ತುಂಬಾ ಹ್ಯಾಸ್ಯಾಸ್ಪದ ಎಂದು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಮಯದಲ್ಲಿ ಜನಸೇನೆ ಸಂಘಟನೆಯ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.