ಹೊಸಪೇಟೆ: ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.
ಓದಿ: ಅಲ್ಲು ಅರ್ಜುನ್ ಕ್ಯಾರವಾನ್ಗೆ ಲಾರಿ ಡಿಕ್ಕಿ..!
ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ, ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್ ಸಹೋದರಿ ಜೆ. ಶಕುಂತಲಾ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ಶಾರದಾಬಾಯಿ ಆಯ್ಕೆಯಾಗುವ ಮೂಲಕ ಕಾಂಗ್ರೆಸ್ ತೆಕ್ಕೆಗೆ ಕಲ್ಲಹಳ್ಳಿ ಗ್ರಾಪಂ ಜಾರಿದೆ.
26 ವರ್ಷಗಳ ಕಾಲ ಸಾಂಪ್ರದಾಯಿಕ ಅವಿರೋಧ ಆಯ್ಕೆಗೆ ತಿಲಾಂಜಲಿ ಹಾಡಿ ಈ ಬಾರಿ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಚುನಾವಣೆ ನಡೆದಿತ್ತು. ಅಷ್ಟು ವರ್ಷಗಳ ಬಳಿಕ ಮೊದಲ ಬಾರಿಗೆ ಚುನಾವಣೆ ನಡೆದಿತ್ತು. ಆದರೆ, ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುವ ಮೂಲಕ ಮೇಲುಗೈ ಸಾಧಿಸಿದೆ.
ಕಲ್ಲಹಳ್ಳಿ ಗ್ರಾಮ ಪಂಚಾಯಿತಿ 9 ಸದಸ್ಯರನೊಳಗೊಂಡಿದೆ. 8 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಒಂದು ಸ್ಥಾನ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು.