ಹೊಸಪೇಟೆ (ವಿಜಯನಗರ): ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹರಿಸಿದ್ದರಿಂದ, ಬಳ್ಳಾರಿಯ ಕಂಪ್ಲಿ ಸೇತುವೆ ನದಿಪಾತ್ರದ 52 ಕುಟುಂಬಗಳ 250 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಈ ಬಗ್ಗೆ ಕಂಪ್ಲಿ ತಹಶೀಲ್ದಾರ್ ಗೌಸಿಯಾ ಬೇಗಂ ಮಾತನಾಡಿ, ಹಳೆ ಸೇತುವೆಯಾಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ನದಿಪಾತ್ರದ ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಈಗಾಗಲೇ ಸಂಚಾರವನ್ನು ನಿಷೇಧಿಸಲಾಗಿದೆ. ಸೇತುವೆ ಮುಳಗಡೆಯಾಗಿದ್ದರಿಂದ ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತಗೊಂಡಿದ್ದು, ಬುಕ್ಕಸಾಗರ ಸೇತುವೆಯಿಂದ ವಾಹನಗಳು ಓಡುತ್ತಿವೆ ಎಂದು ಹೇಳಿದರು.
ಸದ್ಯ ತುಂಗಭದ್ರಾ ಜಲಾಶಯದಿಂದ ನದಿಗೆ 1,30,913 ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದೆ. 1631.60 ಅಡಿ ನೀರಿದ್ದು, 95.531 ಟಿಎಂಸಿ ನೀರು ಸಂಗ್ರಹವಾಗಿದೆ. ಸದ್ಯ ಜಲಾಶಯದಲ್ಲಿ 1,48,453 ಕ್ಯೂಸೆಕ್ ಒಳಹರಿವು ದಾಖಲಾಗಿದೆ ಎಂದು ತುಂಗಭದ್ರಾ ಆಡಳಿತ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಗದಗ: ಮಳೆ ನಿಂತರೂ ಕಡಿಮೆಯಾಗದ ಪ್ರವಾಹ ಭೀತಿ..ಮಲಪ್ರಭಾ ಅಬ್ಬರಕ್ಕೆ ಜನ - ಜೀವನ ಅಸ್ತವ್ಯಸ್ತ