ETV Bharat / state

ಹಥ್ರಾಸ್ ಘಟನೆ ಖಂಡಿಸಿ ಶಾಸಕ ಗಣೇಶ್​ ಪ್ರತಿಭಟನೆ..ಸಾಮಾಜಿಕ ಅಂತರವೇ ಮಾಯ! - Hathras rape case

ಹಥ್ರಾಸ್​​ ಸಾಮೂಹಿಕ ಅತ್ಯಾಚಾರ ಘಟನೆ ಖಂಡಿಸಿ ಶಾಸಕ ಗಣೇಶ್​ ಪ್ರತಿಭಟನೆ ನಡೆಸಿದ್ದು, ಮೃತ ಯುವತಿಯ ಕುಟುಂಬವನ್ನು ಸಂತೈಸಲು ತೆರಳುತ್ತಿದ್ದ ರಾಹುಲ್​ ಗಾಂಧಿ ಜೊತೆ ಪೊಲೀಸರ ಗೂಂಡಾ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

bellari
ಪ್ರತಿಭಟನೆ
author img

By

Published : Oct 9, 2020, 1:08 PM IST

ಬಳ್ಳಾರಿ: ಉತ್ತರಪ್ರದೇಶದ ಹಥ್ರಾಸ್​ನಲ್ಲಿ ವಾಲ್ಮೀಕಿ ಸಮುದಾಯದ ಯುವತಿಯ ಮೇಲಿನ ಅತ್ಯಾಚಾರ ಪ್ರಕರಣ ಖಂಡಿಸಿ ಕಂಪ್ಲಿಯ ಕಾಂಗ್ರೆಸ್ ಶಾಸಕ ಜೆ.ಎನ್.ಗಣೇಶ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.

ಪ್ರತಿಭಟನೆ

ಜಿಲ್ಲೆಯ ಕುರುಗೋಡು ತಾಲೂಕಿನ ಗೆಣಿಕೆಹಾಳ್ ರಸ್ತೆಯಿಂದ ಕುರುಗೋಡು ವೃತ್ತದವರೆಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು. ಹಥ್ರಾಸ್​ನಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೀಡಾದ ವಾಲ್ಮೀಕಿ ಸಮುದಾಯದ ಯುವತಿ ಕುಟುಂಬದವರಿಗೆ ಸಾಂತ್ವನ ಹೇಳಲು ತೆರಳುತ್ತಿದ್ದ ಕಾಂಗ್ರೆಸ್​ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಅವರನ್ನು ಬಂಧಿಸಿರೋದು ಹಾಗೂ ಅವರ ಜೊತೆಗಿನ ಪೊಲೀಸರ ಗೂಂಡಾ ವರ್ತನೆಯನ್ನ ಕಂಪ್ಲಿ ಶಾಸಕ ಜೆ.ಎನ್.ಗಣೇಶ ಖಂಡಿಸಿದ್ದಾರೆ.

ಸಾಮಾಜಿಕ ಅಂತರ ಮಂಗಮಾಯ:

ಈ ಬೃಹತ್ ಪ್ರತಿಭಟನೆಯಲ್ಲಿ ಕೊರ್ಲಗುಂದಿ ಜಿಲ್ಲಾ ಪಂಚಾಯಿತಿ ಸದಸ್ಯ ಎನ್.ಭರತ ರೆಡ್ಡಿ ಸೇರಿದಂತೆ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು.‌ ಆದರೆ ಸಾಮಾಜಿಕ ಅಂತರವೇ ಇರಲಿಲ್ಲ. ಕೆಲವರು ಮಾತ್ರ ಮಾಸ್ಕ್ ಧರಿಸಿದ್ದು ಬಿಟ್ಟರೇ ಬಹುತೇಕ ಕಾರ್ಯಕರ್ತರು ಮಾಸ್ಕ್​​ ಹಾಕಿರಲಿಲ್ಲ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.