ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆಯ ವಿರೋಧಿಸಿ ಜಿಲ್ಲಾ ಹೋರಾಟ ಸಮಿತಿ ಕೈಗೊಂಡಿದ್ದ ಅನಿರ್ದಿಷ್ಟಾವಧಿ ಧರಣಿ 25ನೇ ದಿನಕ್ಕೆ ಕಾಲಿಟ್ಟಿದ್ದು, ಜಿಲ್ಲಾ ಕನ್ನಡ ಯುವಕ ಸಂಘ ಹಾಗೂ ರೈತ ಸಂಘದ ಪದಾಧಿಕಾರಿಗಳು ಬೆಂಬಲ ಸೂಚಿಸಿದ್ದಾರೆ.
ಇಲ್ಲಿನ ಡಿಸಿ ಕಚೇರಿಯ ಎದುರು ಸ್ಥಾಪಿಸಲಾದ ತಾತ್ಕಾಲಿಕ ಟೆಂಟ್ನಲ್ಲಿ ನಾನಾ ಸಂಘಟನೆಗಳ ಮುಖಂಡರೊಂದಿಗೆ ಯುವಕ ಸಂಘದ ಪದಾಧಿಕಾರಿಗಳು ಪಾಲ್ಗೊಂಡು ಕೆಲಕಾಲ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಓದಿ: ಲಾಕ್ಡೌನ್ ಶಾಲೆ ಬಂದ್ ಅವಧಿಯಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚಳ
ಯಾವುದೇ ಕಾರಣಕ್ಕೂ ಅಖಂಡ ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡುವುದು ಬೇಡ. ಭಾಷಾವಾರು ವಿಂಗಡಣೆ ವೇಳೆಯಲ್ಲಿ ಬಳ್ಳಾರಿ ಜಿಲ್ಲೆಯನ್ನ ಅಖಂಡವಾಗಿಯೇ ಉಳಿಸಲಾಗಿತ್ತು. ಹೀಗಾಗಿ, ರಾಜ್ಯ ಸರ್ಕಾರ ಈ ಜಿಲ್ಲೆಯ ವಿಭಜನೆ ಮಾಡೋದು ಸೂಕ್ತವಲ್ಲ. ಕೂಡಲೇ ನೂತನ ವಿಜಯನಗರ ಜಿಲ್ಲೆ ರಚನೆಯನ್ನು ಕೈಬಿಡಬೇಕೆಂದು ಹಿರಿಯ ಮುಖಂಡ ಟಿ.ಜಿ. ವಿಠಲ ಒತ್ತಾಯಿಸಿದ್ದಾರೆ.
ಕನ್ನಡ ಯುವಕರ ಸಂಘದ ಮುಖಂಡ ವಿ.ಎಸ್. ಬಸವರಾಜ, ಜಿಲ್ಲಾ ಹೋರಾಟ ಸಮಿತಿಯ ಮುಖಂಡರಾದ ಚಾಗನೂರು ಮಲ್ಲಿಕಾರ್ಜುನ ರೆಡ್ಡಿ, ಕೆ. ಎರ್ರಿಸ್ವಾಮಿ, ಮಾಧವರೆಡ್ಡಿ, ಗೋವಿಂದ, ನಾರಾಯಣಪ್ಪ, ಬಿ.ಎಂ. ಪಾಟೀಲ ಇದ್ದರು.