ಬಳ್ಳಾರಿ: ಜಿಲ್ಲೆಯಲ್ಲಿ ಕಳಪೆ ರಸಗೊಬ್ಬರ, ಕ್ರಿಮಿನಾಶಕ ಮಾರಾಟ ಮಾಡುತ್ತಿರುವ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ವತಿಯಿಂದ ಪ್ರತಿಭಟಿಸಲಾಯಿತು.

ನಗರದ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ದೂರು ನೀಡಿದರೆ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸಿಲ್ಲ. ರಸಗೊಬ್ಬರ, ಬೀಜ, ಕ್ರಿಮಿನಾಶಕ ಮಾರಾಟದ ಅಂಗಡಿಗಳಿಗೆ ನಿಯಮ ಮೀರಿ ಅನುಮತಿ ನೀಡಲಾಗುತ್ತಿದೆ. ಕೃಷಿ ಇಲಾಖೆ ಅಧಿಕಾರಿಗಳು ಹಣಕ್ಕಾಗಿ ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.

ಯಾವುದೇ ಅಂಗಡಿಯಲ್ಲಿ ಜಿಎಸ್ಟಿ ಬಿಲ್ ನೀಡಿಲ್ಲ. ಈ ಬಗ್ಗೆ ಹೇಳಿದರೆ ಅಧಿಕಾರಿಗಳಿಂದ ಬೇಜವಾಬ್ದಾರಿ ಉತ್ತರ ಬರುತ್ತಿದೆ. ಕೂಡಲೇ ಕಳಪೆ ಕ್ರಿಮಿನಾಶಕ ಮಾರಾಟ ನಿಲ್ಲಬೇಕು ಎಂದು ಆಗ್ರಹಿಸಲಾಯಿತು.