ಬಳ್ಳಾರಿ: ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಭೂಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು.
ಭೂ ಸುಧಾರಣೆ ತಿದ್ದುಪಡಿ ರೈತರಿಗೆ ಮರಣ ಶಾಸನ: ಬಿ. ಗೋಣಿಬಸಪ್ಪ - ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ
ಸರ್ಕಾರ ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಲು ಹೊರಟಿದೆ. ಆದರೆ ಇದು ರೈತರಿಗೆ ಸಂಪೂರ್ಣ ಮರಣ ಶಾಸನವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಬಿ. ಗೋಣಿಬಸಪ್ಪ ತಿಳಿಸಿದರು.
ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ
ಬಳ್ಳಾರಿ: ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಭೂಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ಜಿಲ್ಲಾಧ್ಯಕ್ಷ ಬಿ.ಗೋಣಿಬಸಪ್ಪ ಅವರು ಮಾತನಾಡಿ, ಸರ್ಕಾರ ಭೂಸುಧಾರಣೆ ಕಾಯ್ದೆ ತಿದ್ದುಪಡಿ ಮಾಡಲು ಹೊರಟಿದೆ. ಆದ ಇದು ರೈತರಿಗೆ ಸಂಪೂರ್ಣ ಮರಣ ಶಾಸನವಾಗಿದೆ. ಇದನ್ನು ಕೈಬಿಡಬೇಕು ಎಂದು ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆಯ ಪತ್ರ ನೀಡಿದ್ದೇವೆ. ಈ ಭೂ ಸುಧಾರಣೆ ಕಾಯ್ದೆ ಜಾರಿಗೆ ಬಂದರೆ ಸಣ್ಣ ಪುಟ್ಟ ರೈತರು ಬೀದಿ ಪಾಲಾಗುತ್ತಾರೆ. ಬೆಳೆದ ಬೇಳೆ, ಆಹಾರ ಎಲ್ಲಾ ಬಂಡವಾಳ ಶಾಹಿಗಳ ಕೈಗೆ ಹೋಗುತ್ತದೆ. ಮುಂದಿನ ದಿನಗಳಲ್ಲಿ ಆಹಾರಕ್ಕಾಗಿ ಕಷ್ಟ ಪಡಬೇಕಾಗುತ್ತದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಈ ಭೂ ಸುಧಾರಣೆ ಶಾಸನದ ಬಗ್ಗೆ ವಿಮರ್ಶೆ ಮಾಡಿ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಸರ್ಕಾರ ಭೂಸುಧಾರಣೆ ಕಾಯ್ದೆ 1961 ರಲ್ಲಿ ತಿದ್ದುಪಡಿ ತಂದು ಕಲಂ 79 ಎ,ಬಿ,ಸಿ ಮತ್ತು 80 ನ್ನು ತೆಗೆದು ಹಾಕಲು ಕರಡು ಮಸೂದೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದಿರುತ್ತದೆ. ಆದರೆ ಜನ ಸಮುದಾಯ ಇದನ್ನು ಒಪ್ಪುವುದಿಲ್ಲ ಎಂದರು.