ಹೊಸಪೇಟೆ: ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ಬರಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದ ರೋಟರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೋವಿಡ್-19 ಲಾಕ್‌ಡೌನ್ ನಿಂದಾಗಿ ಅತಿಥಿ ಉಪನ್ಯಾಸಕರ ಬದುಕು ತತ್ತರಿಸಿ ಹೋಗಿದೆ. ಆರ್ಥಿಕ ಮುಗ್ಗಟ್ಟಿನಿಂದ ಹಲವು ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆರ್ಥಿಕ ಸಂಕಷ್ಟದಿಂದಾಗಿ ಬದುಕು ಸಾಗಿಸಲು ಹೆಣಗುಡುತ್ತಿದ್ದಾರೆ. ಕೆಲ ಉಪನ್ಯಾಸಕರು ತಳ್ಳುವ ಗಾಡಿಯಲ್ಲಿ ಹಣ್ಣು-ಹಂಪಲು, ತರಕಾರಿ ಮಾರುತ್ತಾ ಜೀವನ ಸಾಗಿಸುತ್ತಿದ್ದಾರೆ. ಕೂಡಲೇ ಅವರ ನೆರವಿಗೆ ಸರ್ಕಾರ ಬರಬೇಕು ಎಂದು ಆಗ್ರಹಿಸಿದರು. ಬಳಿಕ ಬೇಡಿಕೆ ಈಡೇರಿಕೆಗೆ ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ್ ಶ್ರೀಧರ್ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮುಖಂಡರಾದ ಸಿದ್ದಲಿಂಗ ಬಾಗೇವಾಡಿ, ಎಂ.ಉಮಾದೇವಿ, ಹುಲುಗಪ್ಪ ಇನ್ನಿತರರಿದ್ದರು.