ETV Bharat / state

ಹೊಸಪೇಟೆ: ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಿಸುವಂತೆ ಆಗ್ರಹ - Hosapete Karnataka State Guest Lecturers Committee protest

ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ಸದಸ್ಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಚಿವ ಆನಂದ ಸಿಂಗ್ ಅವರ ಆಪ್ತ ಕಾರ್ಯದರ್ಶಿ ಧರ್ಮೇಂದ್ರ ಸಿಂಗ್ ಅವರಿಗೆ ಮನವಿ ಸಲ್ಲಿಸಿದರು.

Protest
Protest
author img

By

Published : Sep 20, 2020, 2:39 PM IST

ಹೊಸಪೇಟೆ: ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸುವುದು ಮತ್ತು ಸೇವೆಯಿಂದ ಕೈಬಿಡಬಾರದೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ಸದಸ್ಯರು ಸಚಿವ ಆನಂದ ಸಿಂಗ್ ಅವರ ಆಪ್ತ ಕಾರ್ಯದರ್ಶಿ ಧರ್ಮೇಂದ್ರ ಸಿಂಗ್ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿರುವ 413 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,564 ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ. 20-25 ವರ್ಷಗಳಿಂದ ನಿರಂತರವಾಗಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹಾಗಾಗಿ ಅವರಿಗೆ ಸೇವಾ ಭದ್ರತೆಗೆ ಒಳಪಡಿಸಬೇಕು, ಬಾಕಿ ಇರುವ ವೇತನವನ್ನು ಈ ಕೂಡಲೇ ಬಿಡುಗಡೆಗೊಳಿಸಬೇಕು. ಜೊತೆಗೆ ರಜಾ ಅವಧಿಯನ್ನು ಕೆಲಸದ ಅವಧಿಯೆಂದು ಪರಿಗಣಿಸುವಂತೆ ಆಗ್ರಹಿಸಿದರು.

2019 ರ ಜನವರಿಯಲ್ಲಿ ಯುಜಿಸಿ ಸುತ್ತೋಲೆಯು, ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಪ್ರತಿ ಬೋಧನಾ ಅವಧಿಗೆ ರೂ. 1,500 ಅಥವಾ ಮಾಸಿಕ 50,000 ರೂ. ವರೆಗೆ ವೇತನವನ್ನು ನಿಗದಿ ಮಾಡಬೇಕು ಎಂದು ನಿರ್ದೇಶನ ನೀಡಿತ್ತು. ಆದರೆ ಇಂದಿಗೂ ನಮ್ಮ ರಾಜ್ಯದಲ್ಲಿ ಅತಿಥಿ ಉಪನ್ಯಾಸಕರಿಗೆ ನೆಟ್, ಸೆಟ್ ಅಥವಾ ಪಿ.ಎಚ್‌ಡಿ. ಆಗಿರುವವರಿಗೆ ಮಾಸಿಕ ರೂ.13,000 ಉಳಿದವರಿಗೆ ರೂ. 11,000 ರೂ. ನೀಡಲಾಗುತ್ತದೆ. ಕಳೆದ 4-5 ತಿಂಗಳಿಂದ ಆ ವೇತನವೂ ಪಾವತಿಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮುಖಂಡರಾದ ಪ್ರಶಾಂತ್ ಬಡಿಗೇರ್, ಡಾ.ಪಂಪಾಪತಿ ಮುಂತಾದವರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.