ಬಳ್ಳಾರಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಸುಕಿನ ಜಾವ 3 ಗಂಟೆಗೆ ಹಲಕುಂದಿ ಗ್ರಾಮದ ಬಳಿ ನಡೆದಿದೆ. ಮೃತರು ಎಸ್‌ಸಿ, ಎಸ್‌ಟಿ ಹಾಸ್ಟೆಲ್ ವಿದ್ಯಾರ್ಥಿಗಳಾದ ಎಮ್ಮಿಗನೂರಿನ ಕನಕರಾಜು(19), ಮುರುಡಿ ಗ್ರಾಮದ ಶಂಕರ(18), ಸಂಡೂರು ನಾಗೇನಹಳ್ಳಿಯ ಹೊನ್ನೂರ(22)ಎಂದು ಗುರುತಿಸಿಲಾಗಿದೆ.
ವಿದ್ಯಾರ್ಥಿಗಳು ನಸುಕಿನ ಜಾವ 3 ಗಂಟೆಗೆ ರಸ್ತೆ ದಾಟುತ್ತಿರುವಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಶಂಕಿಸಲಾಗಿದೆ. ಬೆಂಗಳೂರಿನಿಂದ ಜೇವರ್ಗಿಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಮೇಲೆ ಹರಿದ ಪರಿಣಾಮ ವಿದ್ಯಾರ್ಥಿಗಳ ದೇಹಗಳು ಛಿದ್ರಗೊಂಡಿವೆ.
ಅಪಘಾತ ವಿಷಯ ತಿಳಿಯುತ್ತಿದ್ದಂತೆ ಬಳ್ಳಾರಿ ಗ್ರಾಮೀಣ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು. ಹಾಸ್ಟೆಲ್ ವಿದ್ಯಾರ್ಥಿಗಳು ಮಧ್ಯರಾತ್ರಿ ಅಲ್ಲಿಗೆ ಏಕೆ ಹೋಗಿದ್ದರೆಂಬುದು ತಿಳಿದು ಬಂದಿಲ್ಲ. ಈ ಘಟನೆ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಅನುಸರಿಸಿದ್ದಾರೆ.
ಓದಿ: ಮಧ್ಯರಾತ್ರಿವರೆಗೆ ಫೋನ್‌ನಲ್ಲಿ ಮಾತನಾಡುತ್ತಿದ್ದ ಮಗಳ ಕತ್ತು ಹಿಸುಕಿದ ಮಲತಂದೆ