ETV Bharat / state

ಬಳ್ಳಾರಿಯಲ್ಲಿ ಕೆಎಸ್​ಆರ್​ಟಿಸಿ ಬಸ್​ ಪಲ್ಟಿಯಾಗಿ 9 ಜನರಿಗೆ ಗಾಯ

ಕೆಎಸ್​ಆರ್​ಟಿಸಿ ಬಸ್​ ಪಲ್ಟಿಯಾಗಿ 9 ಜನ ಗಾಯಗೊಂಡ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

author img

By ETV Bharat Karnataka Team

Published : Sep 14, 2023, 8:26 PM IST

ಕೆಎಸ್​ಆರ್​ಟಿಸಿ ಬಸ್​ ಪಲ್ಟಿ
ಕೆಎಸ್​ಆರ್​ಟಿಸಿ ಬಸ್​ ಪಲ್ಟಿ

ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ 9ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬಳ್ಳಾರಿ ತಾಲೂಕಿನ ಶಿವಪುರದ ಬಳಿ ನಡೆದಿದೆ. ಬಳ್ಳಾರಿಯಿಂದ ಹಡ್ಲಗಿ ಗ್ರಾಮಕ್ಕೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಸಾರಿಗೆ ಬಸ್‌ ರಸ್ತೆ ಬದಿಯ ಗದ್ದೆಯಲ್ಲಿ ಪಲ್ಟಿಯಾಗಿ ಬಿದ್ದಿದೆ. ಸುಮಾರು 50 ಕ್ಕೂ ಹೆಚ್ಚು ಜನರು ಬಸ್​ನಲ್ಲಿ ಪ್ರಯಾಣ ಮಾಡುತ್ತಿದ್ದು, ಅದರಲ್ಲಿ 9 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೋಕಾ ಆಸ್ಪತ್ರೆ ಹಾಗೂ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮೋಕಾ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ತಿಂಗಳು ಶಿವಮೊಗ್ಗದಲ್ಲೂ ಸಾರಿಗೆ ಬಸ್​ ಪಲ್ಟಿಯಾಗಿ ಪ್ರಯಾಣಿಕರು ಗಾಯಗೊಂಡಿದ್ದ ಘಟನೆ ನಡೆದಿತ್ತು. ಸಾಗರಕ್ಕೆ ತೆರಳುತ್ತಿದ್ದ ಸಾರಿಗೆ ಬಸ್​ಗೆ ​ಬೈಕ್ ಅಡ್ಡ ಬಂದಿತ್ತು. ಅಪಘಾತ ತಪ್ಪಿಸಲು ಹೋಗಿ ಬಸ್ ಪಲ್ಟಿಯಾಗಿ ಪ್ರಯಾಣಿಕರು ಗಾಯಗೊಂಡಿದ್ದರು. ಬಸ್ ಪಲ್ಟಿಯಾಗುತ್ತಿದ್ದಂತೆಯೇ ಸ್ಥಳೀಯರು ಹಾಗೂ ಇತರರು ಬಸ್​ನಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದರು.

ಸ್ಟೇರಿಂಗ್ ಕಟ್ ಆಗಿ ಕೆಎಸ್​ಆರ್​ಟಿಸಿ ಬಸ್​ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಕೆಲದಿನಗಳ ಹಿದೆ ನಡೆದಿತ್ತು. ಹಳಿಯಾಳದಿಂದ ಸಾಗರಕ್ಕೆ ಹೋಗುತ್ತಿದ್ದ ಬಸ್ಸಿನಲ್ಲಿ 47 ಜನ ಪ್ರಯಾಣಿಸುತ್ತಿದ್ದರು. ಈ ವೇಳೆ ಸ್ಟೇರಿಂಗ್​ ಕಟ್​ ಆಗಿ ಬಸ್​ ​ಪಲ್ಟಿಯಾದ ತಕ್ಷಣ ಕಂದಕಕ್ಕೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದಿತ್ತು. ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದರು.

ಹಾಸನದಲ್ಲಿ ನಡೆದ ಘಟನೆಯೊಂದರಲ್ಲಿ ರಸ್ತೆ ಬದಿ ನಿಂತಿದ್ದ ರಿಕ್ಷಾಗೆ ಸಾರಿಗೆ ಬಸ್​ ಡಿಕ್ಕಿ ಹೊಡೆದು ಓರ್ವ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದ ಘಟನೆ ಕಳೆದ ತಿಂಗಳು ನಡೆದಿತ್ತು. ಹಾಸನ - ಬೆಂಗಳೂರು ನಾನ್ ಸ್ಟಾಪ್ ಬಸ್ ಬೆಂಗಳೂರಿಂದ ಹಾಸನಕ್ಕೆ ಬರುತ್ತಿತ್ತು. ಈ ವೇಳೆ, ಹಾಸನದಲ್ಲಿ ರಸ್ತೆ ಬದಿ ನಿಲ್ಲಿಸಿದ ಆಟೋಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿ ರಭಸಕ್ಕೆ ರಿಕ್ಷಾ ಪಲ್ಟಿಯಾಗಿತ್ತು ಸ್ಥಳದಲ್ಲಿಯೇ ಒಬ್ಬ ಸಾವನ್ನಪ್ಪಿದ್ದ.

ಚಾಲಕನ ನಿಯಂತ್ರಣ ತಪ್ಪಿ ಕೆಎಸ್​ಆರ್​ಟಿಸಿ ಬಸ್ ಪಲ್ಟಿಯಾಗಿ 32 ಮಂದಿ ಗಾಯಗೊಂಡಿದ್ದ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಮುರುಕನಹಳ್ಳಿ ಬಳಿ ನಡೆದಿತ್ತು. ಗದಗದಿಂದ ಮೈಸೂರಿಗೆ ಹೋಗುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ರಸ್ತೆ ಬದಿಯ ಜಮೀನಿಗೆ ಉರುಳಿ ಬಿದ್ದಿತ್ತು. ಗಾಯಾಳುಗಳನ್ನು ಕೆ ಆರ್ ಪೇಟೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ: Shakti Scheme: ಶಕ್ತಿ ಯೋಜನೆಯಿಂದ ಸಾರಿಗೆ ಬಸ್​ಗಳಲ್ಲಿ ಜನವೋ ಜನ.. ಉತ್ತರ ಕನ್ನಡದಲ್ಲಿ 100 ಹೊಸ ಬಸ್​ಗಳಿಗೆ ಬೇಡಿಕೆ ಸಲ್ಲಿಸಿದ ಅಧಿಕಾರಿಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.