ಬಳ್ಳಾರಿ: ರಾಜ್ಯ ಸಾರಿಗೆ ನೌಕರರ ಮುಷ್ಕರದ ನಡುವೆಯೂ ಕೆಲಸಕ್ಕೆ ಹಾಜರಾಗಿದ್ದ ಸಿಬ್ಬಂದಿಯನ್ನ ಹೊರಗಡೆ ಎಳೆದುಕೊಂಡು ಹೋದ ಘಟನೆಯು ನಗರದ ಒಂದನೇ ಘಟಕದಲ್ಲಿ ನಡೆದಿದೆ.
ರಾಜ್ಯವ್ಯಾಪಿ ಕೈಗೊಂಡಿದ್ದ ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿರುವ ಬೆನ್ನಲ್ಲೇ ಒಂದಿಷ್ಟು ಮಂದಿ ಸಾರಿಗೆ ನೌಕರರು ಕೆಲಸಕ್ಕೆ ಹಾಜರಾಗಿದ್ದರು. ಅದನ್ನ ಸೂಕ್ಷ್ಮವಾಗಿ ಗಮನಿಸಿದ ಪ್ರತಿಭಟನಾ ನಿರತ ಸಾರಿಗೆ ನೌಕರರು ಕೆಲಸಕ್ಕೆ ಹಾಜರಾಗಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೇ, ಅವರನ್ನ ಕಚೇರಿಯಿಂದ ಹೊರಗಟ್ಟುವ ಪ್ರಯತ್ನಕ್ಕೆ ಮುಂದಾದಾಗ, ಕೆಲಕಾಲ ಅವರಿಬ್ಬರ ನಡುವೆ ವಾಗ್ವಾದ ನಡೆಯಿತು.
ಇದನ್ನೂ ಓದಿ: 'ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವುದು ಕಷ್ಟದ ಕೆಲಸ'
ಈ ವಾಗ್ವಾದವು ಕೈಕೈ ಮಿಲಾಯಿಸುವ ಹಂತಕ್ಕೂ ತಲುಪಿತು. ಇದನ್ನು ಸೂಕ್ಷ್ಮವಾಗಿ ಅವಲೋಕಿಸಿದ ಪೊಲೀಸರು ಕೂಡಲೇ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.