ಬಳ್ಳಾರಿ: ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟ ಸರ್ಕಾರದ ಅವಧಿಯಲ್ಲಿ ಬಳ್ಳಾರಿ ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆಗೆ ರೈತರ ಭೂಮಿ ಪರಭಾರೆ ಮಾಡುವ ವಿಚಾರದ ವಿರುದ್ಧ ಧ್ವನಿ ಎತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಈಗ ಏಕೆ ಮೃದು ಧೋರಣೆ ತಾಳಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಕುಡಿತಿನಿ ಶ್ರೀನಿವಾಸ ಪ್ರಶ್ನಿಸಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಂದಾಲ್ ಕಂಪನಿ ಸೀಲ್‌ಡೌನ್ ಹಾಗೂ ಲಾಕ್‌ಡೌನ್ ಎಂಬ ವಿಭಿನ್ನ ಹೇಳಿಕೆ ನೀಡುವ ಸಚಿವರು, ಸಾರ್ವಜನಿಕ ರಂಗದಲ್ಲಿ ಒಂದು ಕ್ಷಣ ಇರಲು ಲಾಯಕ್ಕಿಲ್ಲ. ಅವರು ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಜಿಂದಾಲ್ ವಿಚಾರವಾಗಿ ಸೂಕ್ತ ನಿರ್ಧಾರ ಕೈಗೊಳ್ಳಲು ಮುಂದಿನ 15 ದಿನಗಳ ಕಾಲಾವಕಾಶ ನೀಡುವೆ. ಇಲ್ಲವಾದಲ್ಲಿ ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದೆಂದು ಎಂದು ಎಚ್ಚರಿಕೆ ನೀಡಿದರು.