ಹೊಸಪೇಟೆ: ಹಂಪಿಯ ಗೆಜ್ಜಲು ಮಂಟಪದಿಂದ ವಿಜಯ ವಿಠ್ಠಲ ದೇವಸ್ಥಾನದವರೆಗೆ ಇಂದು ಬ್ಯಾಟರಿ ಚಾಲಿತ ವಾಹನಗಳಿಗೆ ಚಾಲನೆ ನೀಡಲಾಯಿತು.
ಹಂಪಿ ವಿಶ್ವಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರದ(ಹವಾಮಾ) ಆಯುಕ್ತ ಪಿ. ಎನ್. ಲೋಕೇಶ ಅವರು ಮಾತನಾಡಿ, ಲಾಕ್ ಡೌನ್ ಹಿನ್ನೆಲೆಯಲ್ಲಿ ಬ್ಯಾಟರಿ ಚಾಲಿತ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತು. ಈಗ ಮತ್ತೆ ಆರಂಭಿಸಲಾಗಿದೆ. ದಿನದಿಂದ ದಿನಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಬ್ಯಾಟರಿ ಚಾಲಿತ ವಾಹನದಿಂದ ಅನಕೂಲವಾಗಲಿದೆ ಎಂದರು.
ಇದೇ ವೇಳೆ ಕೋವಿಡ್ ಹಿನ್ನೆಲೆ ಕಡ್ಡಾಯ ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ಮಾರಕಗಳ ಬಳಿ ಶುಚಿತ್ವ ಕಾಪಾಡುವುದು ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಹವಾಮಾ ಸಿಬ್ಬಂದಿ ಅರಿವು ಮೂಡಿಸಿದರು.