ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ದಟ್ಟ ಅರಣ್ಯ ಪ್ರದೇಶದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆಯೊಂದು ಬೋನಿಗೆ ಬಿದ್ದಿದ್ದು, ಇದೀಗ ಸಂಡೂರಿನ ರೈತರು, ಕೃಷಿ ಕೂಲಿ ಕಾರ್ಮಿಕರು ನಿಟ್ಟುಸಿರು ಬಿಟ್ಟಿದ್ದಾರೆ.
ಕಳೆದ ಎರಡು ತಿಂಗಳಿಂದ ಈ ಚಿರತೆ ಆಗಾಗ ದಟ್ಟ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿತ್ತು. ಇದರಿಂದ ಕೃಷಿ ಕೂಲಿಕಾರರು, ರೈತರು ಭಯಭೀತರಾಗಿದ್ದರು. ರೈತರ ಮನವಿ ಮೇರೆಗೆ ಅರಣ್ಯ ಇಲಾಖೆಯು ಅಲ್ಲಲ್ಲಿ ಬೋನ್ಗಳನ್ನ ಇಟ್ಟಿತ್ತಾದ್ರೂ ಎನ್ಎಂಡಿಸಿ ಮೈನಿಂಗ್ ಕಂಪನಿಯ ಸುತ್ತಲಿನ ಪ್ರದೇಶದಲ್ಲಿರಿಸಿದ್ದ ಬೋನಿನಲ್ಲಿ ಚಿರತೆ ಬಿದ್ದಿದೆ.
ಚಿರತೆ ಬೋನಿಗೆ ಬಿದ್ದಿರುವ ಮಾಹಿತಿ ಪಡೆದುಕೊಂಡ ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ಸ್ಥಳಕ್ಕಾಗಮಿಸಿ ಅದನ್ನು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.