ಹೊಸಪೇಟೆ: ದೇಶದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಾತನ್ನು ಎಲ್ಲರೂ ಪಾಲಿಸಬೇಕು. ಭಾನುವಾರ ರಾತ್ರಿ 9 ಗಂಟೆ 9 ನಿಮಿಷಕ್ಕೆ ದೀಪ ಹಚ್ಚುವ ಮೂಲಕ ಎಲ್ಲರೂ ಒಗ್ಗಟ್ಟು ಪ್ರದರ್ಶನ ಮಾಡೋಣ ಎಂದು ನಗರದ ಕೊಟ್ಟೂರು ಮಠದ ಶ್ರೀ ಡಾ. ಸಂಗನಬಸವ ಸ್ವಾಮೀಜಿ ಹೇಳಿದ್ದಾರೆ.
ನಗರದ ಕೊಟ್ಟೂರೇಶ್ವರ ಮಠದಲ್ಲಿ ಮಾತನಾಡಿದ ಅವರು, ಇಂದು ಕೊರೊನಾ ವೈರಸ್ ಜಗತ್ತಿನಾದ್ಯಂತ ವ್ಯಾಪಿಸಿ ಭೀತಿ ಹುಟ್ಟಿಸುತ್ತಿದೆ. ನಾವೆಲ್ಲಾ ಒಟ್ಟಾಗಿ ಕೊರೊನಾ ವಿರುದ್ದ ಹೋರಾಡಬೇಕಿದೆ ಎಂದರು.
ಇನ್ನು ಕೊರೊನಾ ವೈರಸ್ ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರ, ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ಹಾಗಾಗಿ ಸಾರ್ವಜನಿಕರು ಮನೆಯಲ್ಲಿಯೇ ಇದ್ದು ಸರ್ಕಾರಕ್ಕೆ ಬೆಂಬಲ ನೀಡಿ ಎಂದು ಮನವಿ ಮಾಡಿದರು.