ಬಳ್ಳಾರಿ : ಜಿಲ್ಲೆಯಲ್ಲಿ ಲಾಕ್‍ಡೌನ್ ಜಾರಿಯಾದಾಗಿನಿಂದ ಈವರೆಗೆ 9500 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. 44.10ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಎಸ್ಪಿ ಸೈದುಲು ಅಡಾವತ್ ಮಾಹಿತಿ ನೀಡಿದರು.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಲಾಕ್‍ಡೌನ್ ಸಮಯದಲ್ಲಿ ಅನಗತ್ಯ ತಿರುಗಾಡುವ ವಾಹನಗಳನ್ನು ಸೀಜ್ ಮಾಡಲಾಗಿದೆ. ಈವರೆಗೂ 9500 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
44.10ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ. 434 ಎಫ್‍ಐಆರ್ ದಾಖಲಿಸಲಾಗಿದೆ ಎಂದು ಎಸ್ಪಿ ವಿವರಿಸಿದರು. ಅಲ್ಲದೆ, ಜನರು ಲಾಕ್‍ಡೌನ್ ನಿಯಮಾವಳಿಗಳ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ಒಂದು ವೇಳೆ ಹೊರಗಡೆ ಬಂದರೆ ವಾಹನಗಳನ್ನು ವಶಪಡಿಸಿಕೊಳ್ಳುವುದರ ಜೊತೆಗೆ ಎಫ್‍ಐಆರ್ ದಾಖಲಿಸಿ ಜೈಲಿಗೆ ಕಳುಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.