ಬಳ್ಳಾರಿ: ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಜಿಲ್ಲೆಯ ಕೊಟ್ಟೂರು ತಾಲೂಕಿನ ಹರಾಳು ಕ್ರಾಸ್ ಬಳಿ ನಡೆದಿದೆ.
ತಾಲುಕಿನ ಹುಣಸಿಕಟ್ಟೆ ಗ್ರಾಮದ ಬಸವರಾಜಪ್ಪ (38) ಮೃತ ವ್ಯಕ್ತಿ. ಹರಪನಹಳ್ಳಿಯಿಂದ ಕೊಟ್ಟೂರು ಕಡೆಗೆ ಬರುತ್ತಿದ್ದ ಕಾರು ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ನುಜ್ಜು ಗುಜ್ಜಾಗಿದೆ.
ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಮತ್ತೊಬ್ಬ ವ್ಯಕ್ತಿ ಮರೂರು ಗ್ರಾಮದ ಹನುಮಂತಪ್ಪ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ದಾವಣಗೆರೆಗೆ ಕಳುಹಿಸಲಾಗಿದೆ.
ಈ ಸಂಬಂಧ ಕೊಟ್ಟೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.