ETV Bharat / state

ಬಸನಗೌಡ ಪಾಟೀಲ್​ ಯತ್ನಾಳ್ ಗೊಂದಲ ಹೇಳಿಕೆ ನೀಡಬಾರದು: ಮಹಾಂತೇಶ್ ಕವಟಗಿಮಠ - basanagouda patil yatnal statement

ನೆರೆ, ಪ್ರವಾಹ ಹಾಗೂ ಕೋವಿಡ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಅಲ್ಲದೇ, ಉತ್ತರ ಕರ್ನಾಟಕ ಹಾಗೂ ಸಮಗ್ರ ಕರ್ನಾಟಕದ ಜನರ ಭಾವನೆಗಳಿಗೆ ಸ್ಪಂದಿಸುತ್ತಿದ್ದಾರೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಠ ಹೇಳಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಗೊಂದಲದ ಹೇಳಿಕೆಗಳನ್ನು ನೀಡಬಾರದು ಎಂದು ಕವಟಗಿಮಠ ಸಲಹೆ ನೀಡಿದರು.

Mahantesh Kamatagimatha
ಮಹಾಂತೇಶ್ ಕಮಟಗಿಮಠ
author img

By

Published : Oct 23, 2020, 12:52 PM IST

ಹೊಸಪೇಟೆ: ಬಿಜೆಪಿಯಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ.‌ ಹೀಗಾಗಿ ವಿಜಯಪುರ ಶಾಸಕ ಬಸವನಗೌಡ ಯತ್ನಾಳ್ ಅವರು ಮಾಧ್ಯಮಗಳ ಮುಂದೆ ಗೊಂದಲ ಹೇಳಿಕೆಗಳನ್ನು ನೀಡಬಾರದು ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಠ ಹೇಳಿದ್ದಾರೆ.

ನಗರದ ಖಾಸಗಿ ಹೋಟೆಲ್​ನಲ್ಲಿ ಮಾತನಾಡಿದ ಅವರು, ನೆರೆ, ಪ್ರವಾಹ ಹಾಗೂ ಕೋವಿಡ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಅಲ್ಲದೇ, ಉತ್ತರ ಕರ್ನಾಟಕ ಹಾಗೂ ಸಮಗ್ರ ಕರ್ನಾಟಕ ಜನರ ಭಾವನೆಗಳಿಗೆ ಸ್ಪಂದಿಸುತ್ತಿದ್ದಾರೆ. ಸಂಪೂರ್ಣ ಅವಧಿಗಾಗಿ ಅವರನ್ನು ಜನರು ಆಯ್ಕೆ ಮಾಡಿದ್ದಾರೆ ಎಂದರು.

ಮಹಾಂತೇಶ್ ಕವಟಗಿಮಠ ಮಾತನಾಡಿದರು

ಶಾಸಕ ಬಸವನಗೌಡ ಯತ್ನಾಳ್ ಬೇಡಿಕೆ ಏನೇ ಇರಲಿ. ಆದರೆ, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪದೇ ಪದೆ ಮಾಧ್ಯಮಗಳ ಮುಂದೆ ಹೇಳಿಕೆಗಳನ್ನು ನೀಡಬಾರದು. ಯಡಿಯೂರಪ್ಪ ಅವರೇ ಮುಂದಿನ ಅವಧಿಯವರೆಗೆ ಮುಖ್ಯಮಂತ್ರಿಗಳಾಗಿರುತ್ತಾರೆ ಎಂದು ಸ್ಪಷ್ಟಪಡಿಸಿದರು.

ಬಳಿಕ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಅವರ ಪರ ನಗರದಲ್ಲಿ ಪ್ರಚಾರ ಮಾಡಿದರು. ಈ ವೇಳೆ ಮುಖಂಡರಾದ ಸಾಲಿ ಸಿದ್ದಯ್ಯಸ್ವಾಮಿ, ವೀರಾಂಜನೇಯ, ಶಂಕರ್ ಮೇಟಿ ಇದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.