ಬಳ್ಳಾರಿ: ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವಾಕಿಂಗ್ ಮಾಡುತ್ತಿದ್ದ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ರೇಣುಕ ನಗರದ ನಿವಾಸಿ ಶಿವಕುಮಾರ್ (52) ಮೃತ ವ್ಯಕ್ತಿ. ಇವರು ಇಂದು ಬೆಳಿಗ್ಗೆ ರೇಣುಕಾ ನಗರದ 8ನೇ ಕ್ರಾಸ್ನಲ್ಲಿ ವಾಕಿಂಗ್ ಮಾಡುತ್ತಿದ್ದಾಗ, ಹಿಂಬದಿಯಿಂದ ಬಂದ ಬೈಕ್ ಸವಾರ ಡಿಕ್ಕಿ ಹೊಡೆದಿದ್ದ. ಪರಿಣಾಮ ಶಿವಕುಮಾರ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಸಂಚಾರಿ ಠಾಣೆ ಅಧಿಕಾರಿಗಳು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.